ಓಬವ್ವ ಜಯಂತಿ ಮುಂದೂಡಿಕೆ

ಬೆಂಗಳೂರು, ನ.10- ನಾಳೆ(ನ. 11) ರಾಜ್ಯಾದ್ಯಂತ ನಡೆಯಬೇಕಿದ್ದ ವೀರ ವನಿತೆ ಒನಕೆ ಓಬವ್ವ ಅವರ ಜಯಂತಿ ಕಾರ್ಯಕ್ರಮವನ್ನು ಸರ್ಕಾರ ಮುಂದೂಡಿದೆ.

ವಿಧಾನಪರಿಷತ್ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವುದರಿಂದ ನ.11ರಂದು ಜಿಲ್ಲಾ ಮತ್ತು ತಾಲೂಕುಗಳಲ್ಲಿ ಆಚರಿಸಲು ಉದ್ದೇಶಿಸಿದ್ದ ಒನಕೆ ಓಬವ್ವ ಜಯಂತಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.