ಓಮಿಕ್ರಾನ್ ತಳಿ ರಾಜ್ಯದಲ್ಲಿ ಪತ್ತೆ ಇಲ್ಲ: ಸಿಎಂ

ಬೆಂಗಳೂರು, ನ.೨೮- ದಕ್ಷಿಣ ಆಫ್ರಿಕಾ ಸೇರಿದಂತೆ ಜಗತ್ತಿನ ವಿವಿಧ ದೇಶಗಳಲ್ಲಿ ಆತಂಕ ಮೂಡಿಸಿರುವ ಹೊಸ ರೂಪಾಂಪತರಿ ತಳಿ ” ಓಮಿಕ್ರಾನ್” ರಾಜ್ಯದಲ್ಲಿ ಪತ್ತೆಯಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದಿಲ್ಲಿ ಹೇಳಿದ್ದಾರೆ.

ದಕ್ಷಿಣ ಆಪ್ರಿಕಾ, ಬೋಟ್ಸ್ ವಾನ ಮತ್ತು ಹಾಂಕ್ ಹಾಂಗ್ ದೇಶಗಳಲ್ಲಿ ವೇಗವಾಗಿ ಹರಡುತ್ತಿದೆ.ಹೀಗಾಗಿ ಆ ದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ದೇಶದಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಪ್ರಧಾನಿ ಸೂಚಿಸಿದ್ದಾರೆ ಎಂದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈಸೂರು, ಧಾರವಾಡದಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಲೇಜುಗಳಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ ಜೊತೆಗೆ ಎಲ್ಲಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಕೊರೋನೋ ಸೋಂಕು ಪತ್ತೆ ಪರೀಕ್ಷೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ

ರಾಜ್ಯದಲ್ಲಿ ಒಮಿಕ್ರೋನ್ ಪತ್ತೆಯಾಗಿದ್ದರೂ ರಾಜ್ಯದಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ವಿಮಾನನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದರು

ಪ್ರಯಾಣಿಕರಿಗೆ ನಿರ್ಬಂಧ:

ಹೊಸ ತಳಿಯ ಸೋಂಕು ಪತ್ತೆಯಾಗಿರುವ ದಕ್ಷಿಣ ಆಫ್ರಿಕಾ ಬೋಟ್ಸ್ವಾನ ಮತ್ತು ಹಾಂಗ್ ಕಾಂಗ್ ದೇಶಗಳಿಂದ ದೇಶಕ್ಕೆ ಬರುವ ಎಲ್ಲ ಪ್ರಯಾಣಿಕರಿಗೆ ನಿರ್ಬಂಧ ವಿಧಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಅವರು ಹೇಳಿದರು.

ವಿದೇಶದಿಂದ ಆಗಮಿಸುವ ಎಲ್ಲ ಪ್ರಯಾಣಿಕರಿಗೆ ಕಡ್ಡಾಯವಾಗಿ ನೆಗೆಟಿವ್ ವರದಿ ಇರಬೇಕು ಮತ್ತು ನೆಗೆಟಿವ್ ವರದಿ ಬಂದವರಿಗೆ ಮಾತ್ರ ವಿಮಾನ ನಿಲ್ದಾಣದಿಂದ ಹೊರಗೆ ಬರಲು ಅವಕಾಶ ಮಾಡಿಕೊಡಲಾಗುತ್ತದೆ ಇಲ್ಲದಿದ್ದರೆ ಪ್ರತ್ಯೇಕವಾಗಿ ಅವರನ್ನು ಚಿಕಿತ್ಸೆ ಕೊಡಿಸಲಾಗುವುದು ಎಂದು ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಓಮಿಕ್ರಾನ್ ಆತಂಕ ಹೆಚ್ಚಿರುವ ನಡುವೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ ಹೀಗಾಗಿ ಎಲ್ಲೆಡೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಅವರು ಹೇಳಿದರು.

ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಪ್ರಮಾಣವನ್ನು ಹೆಚ್ಚು ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದ ಅವರು, ಸೋಂಕು ತಡೆಗಟ್ಟಲು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಎರಡು ಡೋಸ್ ಕಡ್ಡಾಯ:

ಸರ್ಕಾರಿ ನೌಕರರು ೨ ಡೋಸ್ ಲಸಿಕೆ ಪಡೆಯುವುದು ಕಡ್ಡಾಯವಾಗಿದೆ. ಮೊದಲ ಡೋಸ್ ಪಡೆದ ಮಂದಿ ಎರಡನೇ ಡೋಸ್ ಲಸಿಕೆ ಪಡೆಯದಿದ್ದರೆ ತಕ್ಷಣ ಲಸಿಕೆ ಪಡೆಯಬೇಕು ಎಂದು ಅವರು ಸೂಚಿಸಿದ್ದಾರೆ.

ಜೊತೆಗೆ ಸಾರ್ವಜನಿಕ ವಲಯದಲ್ಲಿ ಕೆಲಸ ಮಾಡುವ ಮುಂದೆಯೂ ಕೂಡ ಎರಡು ಡೋಸ್ ಲಸಿಕೆ ಪಡೆದಿರಬೇಕು ಇಲ್ಲದಿದ್ದರೆ ಲಸಿಕೆ ಪಡೆಯುವ ಕೆಲಸ ಮಾಡಬೇಕು ಎಂದು ಅವರು ಹೇಳಿದ್ದಾರೆ.

ಮಾಲುಗಳು ಮತ್ತು ಸರ್ಕಾರಿ ಕಚೇರಿಗಳಲ್ಲಿ ಲಸಿಕೆ ನೀಡಿಕೆ ಹೆಚ್ಚು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು

ಗಡಿಯಲ್ಲಿ ಕಟ್ಟೆಚ್ಚರ:

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ-ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳದಿಂದ ಬರುವ ಪ್ರತಿಯೊಬ್ಬರನ್ನು ಕಡ್ಡಾಯವಾಗಿ ಪರೀಕ್ಷೆ ನಡೆಸುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಪ್ರಕರಣ ಹೆಚ್ಚಾಗುತ್ತಿದೆ ಹೀಗಾಗಿ ಆ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುತ್ತದೆ. ಜನರು ಕೂಡ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಕೇರಳದಿಂದ ಬರುವ ಪ್ರತಿಯೊಬ್ಬರಿಗೂ ಬರೋಣ ಸೋಂಕು ಪರೀಕ್ಷೆ ಕಡ್ಡಾಯವಾಗಿ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ

ಧಾರವಾಡದ ಎಡಿಎಂ ಮೆಡಿಕಲ್ ಕಾಲೇಜಿನಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.ಹೀಗಾಗಲೇ ಹಾಸ್ಟೆಲ್ ಕಂಟೋನ್ಮೆಂಟ್ ಜೋನ್ ಮಾಡಲಾಗಿದೆ ಎಂದು ಅವರು ಹೇಳಿದರು

ಕೋವಿಡ್ ಪರೀಕ್ಷೆ ಪ್ರಮಾಣ ಹೆಚ್ಚಳ ಮಾಡುವಂತೆ ಸೂಚನೆ ನೀಡಲಾಗಿದೆ. ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು ವಿದೇಶಗಳಿಂದ ಬರುವ ಮಂದಿಗೆ ಪರೀಕ್ಷೆ ಕಡ್ಡಾಯ ಎಂದು ಅವರು ತಿಳಿಸಿದರು

ಸತ್ಯಕ್ಕೆ ದೂರ:

ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆ ಇಸ್ರೋ ಖಾಸಗೀಕರಣ ಮಾಡಲಾಗುತ್ತಿದೆ ಎನ್ನುವ ವಿಷಯ ಸತ್ಯಕ್ಕೆ ದೂರವಾದ ಸಂಗತಿ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ

ಕೇಂದ್ರದ ಜೊತೆ ಮಾತುಕತೆ

ಈಗಾಗಲೇ ಎರಡು ಡೋಸ್ ಲಸಿಕೆ ಪಡೆದ ಜನರಿಗೆ ಹೆಚ್ಚುವರಿ ಲಸಿಕೆ ನೀಡುವ ಸಂಬಂಧ ಕೇಂದ್ರ ಸರ್ಕಾರದ ಜೊತೆ ಮಾತುಕತೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಅನುಮತಿ ನೀಡಿದರೆ ಹೆಚ್ಚುವರಿ ದೋರ್ಸಲ್ ಲಸಿಕೆಯನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ೮೦ ಲಕ್ಷ ಡೋಸ್ ಲಸಿಕೆ ಲಭ್ಯವಿದೆ ಅದನ್ನ ಅರ್ಹ ಜನರಿಗೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ