ಓಮಿಕ್ರಾನ್ ಭೀತಿ: ಡಿ 31ರವರೆಗೆ ಮಾರ್ಗಸೂಚಿ ವಿಸ್ತರಣೆ

ನವದೆಹಲಿ, ನ.30- ದೇಶದಲ್ಲಿ ಓಮಿಕ್ರಾನ್ ಹೊಸ ರೂಪಾಂತರ ಸೋಂಕು ಭೀತಿ ಹಿನ್ನೆಲೆಯಲ್ಲಿ ಡಿಸೆಂಬರ್ 31ರ ತನಕ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ವಿಸ್ತರಣೆ ಮಾಡಿದೆ.

ಹೊಸ ಮಾರ್ಗಸೂಚಿಯ ಪ್ರಕಾರ ಅಂತರಾಷ್ಟ್ರೀಯ ಪ್ರಯಾಣಿಕರ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗಿದೆ. ಪ್ರತಿಯೊಬ್ಬರನ್ನು ಕಡ್ಡಾಯವಾಗಿ ವಿಮಾನ ನಿಲ್ದಾಣಗಳಲ್ಲಿ ತಪಾಸಣೆಗೆ ಒಳಪಡಿಸಲು ಸೂಚಿಸಲಾಗಿದೆ.

ಕೇಂದ್ರ ಗೃಹ ಸಚಿವಾಲಯ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯಲ್ಲಿ ದೇಶದ ಎಲ್ಲ ರಾಜ್ಯಗಳು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಅದರಲ್ಲಿಯೂ ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿರುವ ಹೊಸ ಮಾದರಿಯ ಓಮಿಕ್ರಾನ್ ಸೋಂಕು ದೇಶದಲ್ಲೂ ಭೀತಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

ನವಂಬರ್ 25 ರಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಡಿಸೆಂಬರ್ 31ರ ತನಕ ಕಟ್ಟುನಿಟ್ಟಾಗಿ ಪಾಲಿಸಬೇಕು ಇದರಲ್ಲಿ ಯಾವುದೇ ನಿರ್ಲಕ್ಷಿಸುವುದು ಸರಿಯಲ್ಲ ಎಂದು ಸಲಹೆ ನೀಡಿದೆ.

ಈ ನಡುವೆ ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸುವಂತೆ ಸೂಚನೆ ನೀಡಿದೆ.

ಅದರಲ್ಲಿಯೂ ಅಂತರಾಷ್ಟ್ರೀಯ ಪ್ರಯಾಣಿಕರ ಮೇಲೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಸೋಂಕಿನ ಲಕ್ಷಣ ಕಂಡು ಬಂದರೆ ಅವರನ್ನು ಪ್ರತ್ಯೇಕವಾಗಿ ಚಿಕಿತ್ಸೆ ಕೊಡಿಸುವುದು ಸೇರಿದಂತೆ ಹಲವು ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವಂತೆ ನಿರ್ದೇಶನ ನೀಡಲಾಗಿದೆ.

ಹೊಸ ಮಾದರಿಯ ತಡೆಯ ರೋಗ ಲಕ್ಷಣಗಳು ಕಂಡುಬಂದರೆ ಅದನ್ನು ರಾಜ್ಯ ಸರ್ಕಾರಗಳು ತಕ್ಷಣ ಹೆಚ್ಚಿನ ಪರೀಕ್ಷೆಗೆ ಕಳುಹಿಸುವಂತೆಯೂ ನಿರ್ದೇಶನ ನೀಡಲಾಗಿದೆ