ಓವರ್‍ಟೇಕ್ ಯತ್ನ: ಲಾರಿ ಅಡಿ ಸಿಲುಕಿ ಬೈಕ್ ಸವಾರ ಸಾವು

ಕಲಬುರಗಿ,ಫೆ.20: ಓವರ್ ಟೇಕ್ ಮಾಡಲು ಯತ್ನಿಸಿದ ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ಕೆರಿಭೋಸಗಾ ಕ್ರಾಸ್ ಬಳಿ ಸಂಭವಿಸಿದೆ.
ಅಳಂದ ತಾಲೂಕಿನ ಸಾವಳೇಶ್ವರ ಗ್ರಾಮದ ಮಾರುತಿ ಕಾಶಿನಾಥ ಗೋಡಕೆ (56) ಮೃತಪಟ್ಟ ವ್ಯಕ್ತಿ. ಈತ ತಮ್ಮ ಊರು ಸಾವಳೇಶ್ವರ ಗ್ರಾಮದಿಂದ ಕಲಬುರಗಿ ಕಡೆಗೆ ಹೊರಟಿದ್ದಾಗ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ.
ಸಂಚಾರಿ ಠಾಣೆ-2 ಪೆÇಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.ಸಂಚಾರಿ ಠಾಣೆ- 2ರಲ್ಲಿ ಪ್ರಕರಣ ದಾಖಲಾಗಿದೆ.