ಓ ಮೈ ಲವ್ ಗೆ ದೇವ್ ಗಿಲ್ ವಿಲನ್

ಸ್ಮೈಲ್ ಶ್ರೀನು ನಿರ್ದೇಶನದಲ್ಲಿ ಮೂಡಿಬರುತ್ತಿರುವ “ಓ ಮೈ ಲವ್” ಚಿತ್ರಕ್ಕೆ ಬೆಂಗಳೂರಿನ ಮಿನರ್ವ ಮಿಲ್ ಆವರಣದಲ್ಲಿ ಅದ್ದೂರಿ ವೆಚ್ಚದಲ್ಲಿ ನಿರ್ಮಿಸಿದ ಸೆಟ್‍ನಲ್ಲಿ ಸಾಹಸ ಸನ್ನಿವೇಶಗಳನ್ನು ಸೆರೆಹಿಡಿಯುವುದರೊಂದಿಗೆ ಎರಡನೇ ಹಂತದ ಚಿತ್ರೀಕರಣ ಪೂರೈಸಿದೆ.

ಮಗಧೀರ ಖ್ಯಾತಿಯ ವಿಲನ್ ದೇವ್‍ಗಿಲ್ ಹಾಗೂ ನಾಯಕ ಅಕ್ಷಿತ್ ಶಶಿಕುಮಾರ್ ನಡುವಿನ ಭರ್ಜರಿ ಸಾಹಸ ದೃಷ್ಯಗಳನ್ನು ರಿಯಲ್ ಸತೀಶ್ ಸಾರಥ್ಯದಲ್ಲಿ ಚಿತ್ರೀಕರಿಸಿಕೊಳ್ಳಲಾಯಿತು,

ನಾಯಕಿ ಕೀರ್ತಿ ಕಲ್ಕೆರೆ, ಎಸ್.ನಾರಾಯಣ್, ಸಂಗೀತ, ಸುಂದರಶ್ರೀ, ಭಾಗ್ಯಶ್ರೀ, ಪೃಥ್ವೀರಾಜ್ ಅವರುಗಳು ಸಹ ಇಲ್ಲಿ ಭಾಗವಹಿಸಿದ್ದರು. ಇದರೊಂದಿಗೆ ಚಿತ್ರದ ಶೇ40ರಷ್ಟು ಭಾಗದ ಶೂಟಿಂಗ್ ಮುಗಿದಿದೆ.

ಜಿಸಿಬಿ ಪ್ರೊಡಕ್ಷನ್ ಲಾಂಛನದಲ್ಲಿ ಜಿ. ರಾಮಾಂಜಿನಿ ಕಥೆ ಬರೆದು ಬಹುಕೋಟಿ ಬಂಡವಾಳ ಹಾಕಿ ನಿರ್ಮಿಸುತ್ತಿರುವ ಹೊಸ ಥರದ ನಿರೂಪಣೆ ಒಳಗೊಂಡ ಚಿತ್ರ ಓ ಮೈ ಲವ್

ವಿಭಿನ್ನವಾದ ಲವ್, ಫ್ಯಾಮಿಲಿ ಎಂಟರ್‍ಟೈನರ್ ಕಥಾಹಂದರ ಹೊಂದಿರುವ ಚಿತ್ರವನ್ನು ಬಳ್ಳಾರಿ ದಬಾರ್, ತೂಫಾನ್ ಹಾಗೂ 18-25 ಚಿತ್ರಗಳನ್ನು ನಿರ್ದೇಶಿಸಿದ್ದ ಸ್ಮೈಲ್ ಶ್ರೀನು ಚಿತ್ರಕತೆ-ಸಂಭಾಷಣೆಗಳನ್ನು ಬರೆದು ನಿರ್ದೇಶಿಸುತ್ತಿದ್ದಾರೆ.

ಆರಂಭದಿಂದಲೂ ಚಿತ್ರದ ಕಥೆ ಹಾಗೂ ನಿರೂಪಣೆಗೆ ಒತ್ತುಕೊಡುವುದರೊಂದಿಗೆ ಹೊಸ ಪ್ರತಿಭಗಳನ್ನು ಹಾಕಿಕೊಂಡು ಚಿತ್ರ ಮಾಡುತ್ತಿದ್ದ ಸ್ಮೈಲ್ ಶ್ರೀನು ಈ ಸಲ ಹೊಸಬರ ಜೊತೆ ಚಿತ್ರರಂಗದ ಹೆಸರಾಂತ ಅನುಭವಿ ಕಲಾವಿದರನ್ನು ಕೂಡ ಬಳಸಿಕೊಂಡಿದ್ದಾರೆ.

ಚಿತ್ರಕ್ಕೆ ಚರಣ್ ಅರ್ಜುನ್ ಸಂಗೀತ, ರಿಯಲ್ ಸತೀಶ್ ಸಾಹಸ, ಡಾ.ವಿ.ನಾಗೇಂದ್ರ ಪ್ರಸಾದ್ ಅವರ ಸಾಹಿತ್ಯ, ವಿ.ಮುರಳಿ ನೃತ್ಯ ನಿರ್ದೇಶನ, ಡಿ.ಮಲ್ಲಿಕ್ ಸಂಕಲನ, ಜನಾರ್ದನ್ ಕಲಾ ನಿರ್ದೇಶನವಿದೆ.

ಹಿರಿಯ ನಿರ್ದೇಶಕ ಎಸ್. ನಾರಾಯಣ್, ಅಕ್ಷಿತ್ ಶಶಿಕುಮಾರ್, ಕೀರ್ತಿ ಕಲ್ಕೆರೆ, ದೀಪಿಕಾ ಆರಾಧ್ಯ, ಪೃಥ್ವಿರಾಜ್ ಸಾಧುಕೋಕಿಲ, ಪವಿತ್ರಾ ಲೋಕೇಶ್, ಸಂಗೀತಾ, ಆನಂದ್, ಭಾಗ್ಯಶ್ರೀ, ಶಿಲ್ಪಾ, ರವಿ ರಾಮ್‍ಕುಮಾರ್ ಹಾಗೂ ಇತರರು ಚಿತ್ರದ ತಾರಾ ಬಳಗದಲ್ಲಿದ್ದಾರೆ.