
ಔರಾದ : ಮಾ.14:ತಾಲೂಕು ವೀರಶೈವ ಸಮಾಜ ಒಕ್ಕೂಟದ ಮಾರ್ಚ್ 15 ರಂದು ಔರಾದ ಪಟ್ಟಣದಲ್ಲಿ ಅದ್ದೂರಿಯಾಗಿ ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿ ಆಚರಿಸಲಾಗುವುದು, ಪ್ರಯುಕ್ತ ಎಲ್ಲ ಸಮಾಜ ಬಾಂಧವರು ತನು ಮನ ಧನ ಸೇವೆಯ ಮೂಲಕ ಜಗದ್ಗುರು ರೇಣುಕಾಚಾರ್ಯ ಜಯಂತಿಯ ಆಚರಣೆಯಲ್ಲಿ ಪಾಲ್ಗೊಳ್ಳಬೇಕೆಂದು ಹಣೇಗಾಂವ ಶ್ರೀ ಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಮಾನವ ಧರ್ಮಕ್ಕೆ ಜಯವಾಗಲಿ ಧರ್ಮದಿಂದಲೆ ವಿಶ್ವಕ್ಕೆ ಶಾಂತಿ ಶಾಂತಿ ಎಂದು ಭೋದಿಸಿದ ಜಗದಾದಿ ಜಗದ್ಗುರು ಶ್ರೀ ರೇಣುಕಾಚಾರ್ಯರ ಜಯಂತಿ ಆಚರಣೆಯನ್ನು ಇದೆ ಮೊದಲ ಬಾರಿಗೆ ಸರ್ಕಾರ ಆಚರಣೆ ಮಾಡಿದ್ದು ಸಂತಸದ ವಿಷಯ ಔರಾದ ತಾಲೂಕು ವೀರಶೈವ ಸಮಾಜದ ವತಿಯಿಂದ ನಾಳೆ ದಿ: 15/03/2023 ರಂದು ಬುಧವಾರ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸಾಯಂಕಾಲ 5:00 ಗಂಟೆಗೆ ಜಯಂತಿ ಆಚರಣೆ ಆಯೋಜಿಸಲಾಗಿದೆ.
ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಕನ್ನಡಾಂಬೆ ವೃತ್ತದಲ್ಲಿ ಸಾಯಂಕಾಲ 4:00 ಗಂಟೆಗೆ ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಲಿದ್ದು ಪಟ್ಟಣದ ಮುಖ್ಯ ರಸ್ತೆಯ ಮೂಲಕ ಬಸವೇಶ್ವರ ವೃತ್ತದಲ್ಲಿ ತಲುಪಲಿದೆ. ತದನಂತರ ವೇದಿಕೆ ಜರುಗಲಿದೆ ಪ್ರಯುಕ್ತ ಎಲ್ಲ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.