ಔರಾದ್ ಕರ್ ವರದಿ ಜಾರಿಗೆ ತರಲು ಯತ್ನ: ಪರಮೇಶ್ವರ್

ಸಂಜೆವಾಣಿ ನ್ಯೂಸ್
ಮೈಸೂರು, ಜು.01:- ಪೆÇಲೀಸರ ಅನುಕೂಲಕ್ಕಾಗಿ ಔರಾದ್ ಕರ್ ವರದಿಯನ್ನು ಆದಷ್ಟು ಜಾರಿಗೆ ತರಲು ಯತ್ನಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದರು.
ನಗರದಲ್ಲಿ ಇಂದು ಸುದ್ದಿ ಗಾರರೊಂದಿಗೆ ಡಾ. ಪರಮೇಶ್ವರ ಅವರು ಮಾತನಾಡಿದರು. ಔರಾದ್ಕರ್ ವರದಿಯನ್ನು ಸಂಪೂರ್ಣ ವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗದು. ಆದರೆ ಅದರಲ್ಲಿನ ಕೆಲ ಅಂಶಗಳನ್ನು ಸರ್ಕಾರ ಪರಿಗಣಿಸಿ ಜಾರಿಗೆ ತರಲಾಗುವುದು ಎಂದವರು ಹೇಳಿದರು.
ಹಿರಿಯ ಪೆÇಲೀಸ್ ಅಧಿಕಾರಿಗಳಿಗೆ ವಾರದ ರಜೆ ನೀ ಡುವ ಬಗ್ಗೆ ಪರಿಶೀಲಿಸಿ ಮುಂದಿನ ದಿನಗಳಲ್ಲಿ ಅದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು ಎಂದವರು ತಿಳಿಸಿದರು.
ಮೈಸೂರು-ಬೆಂಗಳೂರು ರಸ್ತೆಯಲ್ಲಿನ ಮಂಡ್ಯ ಸಮೀಪ ನಡೆದಿರುವ ದರೋಡೆ ಬಗ್ಗೆ ನನಗೆ ಮಾಹಿತಿ ಇಲ್ಲ ಈ ಬಗ್ಗೆ ಪೂರ್ಣ ಮಾಹಿತಿ ಪಡೆದು ಅಗತ್ಯ ಕ್ರಮವನ್ನು ಕೈಗೊಳ್ಳಲಾಗುವುದು ಎಂದವರು ತಿಳಿಸಿದರು. ಮೈಸೂರು ಬೆಂಗಳೂರು ಹೈವೇ ಟೋಲ್ ಕುರಿತು ಮಾತನಾಡಿದ ಅವರು ರಾಜ್ಯ ಸರ್ಕಾರದ ಅಡಿಯಲ್ಲಿ ಟೋಲ್ ಸಂಗ್ರಹ ಬರುವುದಿಲ್ಲ. ಕೇಂದ್ರ ಸರ್ಕಾರ ಈ ಕುರಿತು ನಿರ್ಧಾರ ಕೈಗೊಳ್ಳಲಿದೆ. ನಾವು ಸಹ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದು ಟೂಲ್ ಸಂಗ್ರಹ ದರದಲ್ಲಿ ಕಡಿತ ಗೊಳಿಸಬೇಕೆಂದು ಬೇಡಿಕೆ ಇಟ್ಟಿದ್ದೇವೆ ಎಂದವರು ಹೇಳಿಸದರು.
ನಾನು ಇಂದು ನಾಡ ಅದಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದು ರಾಜ್ಯದ ಸರ್ವಾಂಗಿನ ಅಭಿವೃದ್ಧಿಗಾಗಿ ದೇವಿಯಲ್ಲಿ ಪ್ರಾರ್ಥಿಸಿದ್ದೇನೆ ಎಂದವರು ತಿಳಿಸಿದರು.
ಮೈಸೂರು ಒಡೆಯರು ಮನೆತನದವರಿಗೂ ನಮಗೂ ಬಹಳ ವರ್ಷಗಳಿಂದ ಪರಿಚಯವಿದೆ. ಅವರನ್ನು ಭೇಟಿಯಾಗಲು ಇಂದು ನಾನು ಮೈಸೂರಿಗೆ ಬಂದಿರುವುದಾಗಿ ಪರಮೇಶ್ವರ ಅವರು ತಿಳಿಸಿದರು.