
ಗುರುಮಠಕಲ್ :ಮಾ.12:ಕಂದಕೂರ್ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಕಂದಕೂರು ಗ್ರಾಮದಲ್ಲಿ ತಾಲೂಕ್ ಸ್ವೀಪ್ ಸಮಿತಿ ಹಾಗೂ ಗ್ರಾಮ ಪಂಚಾಯತ್ ಸ್ವೀಪ್ ಸಮಿತಿ ವತಿಯಿಂದ ಮತದಾನದ ಕುರಿತು ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಯಿತು ಸದರಿ ಕಾರ್ಯಕ್ರಮದಲ್ಲಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಸಹಾಯಕ ನಿರ್ದೇಶಕರು ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ. ಶಾಲಾ ಮುಖ್ಯ ಗುರುಗಳು, ಅಂಗನವಾಡಿ ಕಾರ್ಯಕರ್ತರು, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿಯವರು, ಗ್ರಾಮ ಲೆಕ್ಕಾಧಿಕಾರಿ ಹಾಗೂ ಗ್ರಾಮದ ಸಾರ್ವಜನಿಕರು ಪಾಲ್ಗೊಂಡಿದ್ದರು.