ಕಂದಾಯ ಅದಾಲತ್ ಸದ್ಬಳಕೆಗೆ ನ್ಯಾ.ಶುಕ್ಲಾಕ್ಷ ಪಾಲನ್ ಕರೆ

ಕೋಲಾರ,ಜು,೮-ಉಪ ವಿಭಾಗದ ಹಂತದಲ್ಲಿ ಪ್ರಕರಣಗಳನ್ನು ಹೆಚ್ಚಾಗಿ ವಿಲೇವಾರಿ ಮಾಡಲು ಕಂದಾಯ ಆದಾಲತ್‌ನ್ನು ಆಯೋಜಿಸಲಾಗಿದೆ ಇದನ್ನು ಸಾರ್ವಜನಿಕರು ಸದ್ಬಳಿಸಿ ಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶುಕ್ಲಾಕ್ಷ ಪಾಲನ್ ಕರೆ ನೀಡಿದರು.
ನಗರದ ಉಪ ವಿಭಾಗಾಧಿಕಾರಿಗಳ ಕಚೇರಿಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಂದಾಯ ಅದಾಲತ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಸಾರ್ವಜನಿಕರು ತಾಲ್ಲೂಕು ಜಿಲ್ಲಾ ಕೇಂದ್ರಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಸರ್ಕಾರ ಹಮ್ಮಿಕೊಂಡಿರುವ ಕಂದಾಯ ಅದಾಲತ್ ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಸಾರ್ವಜನಿಕರಿಗೆ ಅನುಕೂಲವಾಗುವಂತಹ ಕಂದಾಯ ಅದಾಲತ್ ಹಮ್ಮಿಕೊಂಡಿರುವ ಉಪ ವಿಭಾಗದ ವೆಂಕಟ್‌ಲಕ್ಷ್ಮೀ ಅವರಿಗೆ ಆಬಾರಿಯಾಗಿರುತ್ತೇವೆ ಎಂದು ತಿಳಿಸಿದರು.
ಇದೇ ರೀತಿಯಾಗಿ ಕಾರ್ಯನಿರ್ವಹಿಸುತ್ತಿದ್ದರೆ ದಿನದಿಂದ ದಿನಕ್ಕೆ ಕಂದಾಯದ ಪ್ರಕರಣಗಳನ್ನು ವಿಲೇವಾರಿ ಮಾಡಬಹುದು ಎಂದರು.
ಉಪ ವಿಭಾಗಾಧಿಕಾರಿಗಳಾದ ವೆಂಕಟ್‌ಲಕ್ಷ್ಮೀ ಮಾತನಾಡಿ ಈ ಕಂದಾಯ ಆದಾಲತ್‌ನ್ನು ರೈತರು ಹಾಗೂ ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಸುನೀಲ್ ಎಸ್. ಹೊಸಮನಿ, ಕೋಲಾರ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಮುನೇಗೌಡ ಎಂ. ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.