ಕಂದಾಯ ಇಲಾಖೆಯಲ್ಲಿ ಏಜೆಂಟರ ಹಾವಳಿ ತಡೆಗೆ ಕ್ರಮ

ಹುಬ್ಬಳ್ಳಿ, ಜ31: ಕಂದಾಯ ಇಲಾಖೆಯಲ್ಲಿ ಏಜೆಂಟರ ಹಾವಳಿ ತಪ್ಪಿಸಲು ಕ್ರಮ ಕೈಕೊಳ್ಳಲಾಗುತ್ತದೆ ಎಂದು ರಾಜ್ಯ ಕಂದಾಯ ಖಾತೆ ಸಚಿವ ಕೃಷ್ಣ ಭೈರೇಗೌಡ ಹೇಳಿದರು.
ನಗರದ ತಹಶೀಲ್ದಾರ ಕಚೇರಿ, ಉಪನೊಂದಣಾಧಿಕಾರಿ ಕಚೇರಿ ಸೇರಿದಂತೆ ಇತರೆಡೆಗಳಲ್ಲಿ ಇಂದು ಮುಂಜಾನೆ ದಿಢೀರ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ತಮ್ಮ ಇಲಾಖೆ ಕಾರ್ಯವೈಖರಿ ತಿಳಿಯುವ ನಿಟ್ಟಿನಲ್ಲಿ ಈ ಭೇಟಿ ನೀಡಿದ್ದು ಯಾರೇ ತಪ್ಪು ಮಾಡಲಿ ಅವರ ಮೇಲೆ ಸೂಕ್ತ ಕ್ರಮ ಕೈಕೊಳ್ಳಲಾಗುತ್ತದೆ ಎಂದು ಅವರು ಹೇಳಿದರು.
ವಿದ್ಯಾರ್ಥಿಗಳಿಗೆ ಏಕಗವಾಕ್ಷಿ ವ್ಯವಸ್ಥೆ ಮೂಲಕ ವಿವಿಧ ದಾಖಲೆಗಳನ್ನು ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದರು.