ಕಂದಾಯ ಸಚಿವರ ಪ್ರವಾಸ

ಕಲಬುರಗಿ,ಜು.30:ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಬೆಂಗಳೂರಿಂದ ಉದ್ಯಾನ್ ಎಕ್ಸ್ ಪ್ರೆಸ್ ರೈಲಿನ ಮೂಲಕ ಜುಲೈ 31 ರಂದು ಬೆಳಿಗ್ಗೆ‌ 8 ಗಂಟೆಗೆ ಕಲಬುರಗಿ ನಗರಕ್ಕೆ ಆಗಮಿಸುವರು.

ಅಂದು ಬೆಳಿಗ್ಗೆ 10.30 ರಿಂದ ಸಾಯಂಕಾಲ 5.30 ಗಂಟೆ ವರೆಗೆ ಕಲಬುರಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆಯ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ ರಾತ್ರಿ 8.35 ಗಂಟೆಗೆ ಸೋಲಾಪೂರ-ಹಾಸನ್ ಎಕ್ಸ್ ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.