ಕಂಪ್ಲಿ ಕುಡಿವ ನೀರಿನ ಘಟಕ ಸ್ಥಾಪನೆ

??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

ಕಂಪ್ಲಿ, ಮಾ.26- ರಾಜ್ಯ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಮುಂದಿನ ದಿನಗಳಲ್ಲಿ ಶಾಸಕರ ಅನುದಾನದಡಿಯಲ್ಲಿ ಶುದ್ಧ ಕುಡಿವ ನೀರಿನ ಘಟಕಗಳನ್ನು ಆರಂಭಿಸುವ ಮೂಲಕ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಹೊಸಪೇಟೆ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಜಿ.ಶೀನಯ್ಯ ತಿಳಿಸಿದರು.
ಇಲ್ಲಿನ ಹೊಸ ಬಸ್ ನಿಲ್ದಾಣಕ್ಕೆ ಅವರು ಬುಧವಾರ ಭೇಟಿ ನೀಡಿ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಿ ಬಳಿಕ ಮಾತನಾಡಿ, ಬಸ್ ನಿಲ್ದಾಣಗಳಲ್ಲಿ ಸ್ವಚ್ಚತೆಗಾಗಿ ಈಗಾಗಲೇ ಟೆಂಡರ್ ಕರೆದಿದ್ದು, ಮುಂದಿನ ದಿನದಲ್ಲಿ ಅನುಮೋದನೆ ದೊರೆತ ನಂತರ ಸ್ವಚ್ಚತಾ ಕಾರ್ಯ ಕೈಗೊಳ್ಳಲಾಗುವುದು.ಇನ್ನು ಗ್ರಾಮೀಣ ಭಾಗಗಳಲ್ಲಿ ಬಸ್ ವ್ಯವಸ್ಥೆ ಕಲ್ಪಿಸುವ ಮೂಲಕ ವಿದ್ಯಾರ್ಥಿಗಳಿಗೆ ಹಾಗೂ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಲಾಗಿದೆ. ಕಂಪ್ಲಿಯ ಬಸ್ ನಿಲ್ದಾಣದಲ್ಲಿ ಬೇರೆ ಬೇರೆ ಊರುಗಳಿಗೆ ತೆರಳುವ ಪ್ಲಾಟ್ ಫಾರಂಗಳನ್ನು ಹಾಕಲಾಗಿದೆ. ಬಸ್‍ಗಳ ಸಂಚಾರದ ವೇಳಾ ಪಟ್ಟಿಯನ್ನೂ ಹಾಕಲಾಗಿದೆ. ಕಂಪ್ಲಿ ಭಾಗದ ಪ್ರಯಾಣಿಕರಿಗೆ ಬಸ್‍ಗಳ ಸಮಸ್ಯೆ ಉದ್ಭವವಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಕಂಪ್ಲಿ ಬಸ್ ನಿಲ್ದಾಣದ ಸಂಚಾರ ನಿಯಂತ್ರಣಾಧಿಕಾರಿ ತಿಪ್ಪೇಸ್ವಾಮಿ ಇದ್ದರು.