ಸಂಜೆವಾಣಿ ವಾರ್ತೆ
ಕುರುಗೋಡು:ಏ.14: ಎಸ್ ಯುಸಿಐ ಪಕ್ಷದ ವತಿಯಿಂದ ಕಂಪ್ಲಿ ವಿಧಾನಸಭಾ ಚುನಾವಣೆಯ ಅಭ್ಯರ್ಥಿ ಎ.ದೇವದಾಸ್ ಅವರು ತಮ್ಮ ಹುಟ್ಟೂರು ಸೋಮಸಮುದ್ರ ಗ್ರಾಮದಲ್ಲಿ ಗುರುವಾರ ಬಿರುಸಿನ ಪ್ರಚಾರ ಕೈಗೊಂಡರು.
ಕಂಪ್ಲಿ ವಿಧಾನಸಭಾ ಕ್ಷೇತ್ರಕ್ಕೆ ಸ್ಪರ್ಧಿಸಲಿರುವ SUCI ಕಮ್ಯುನಿಸ್ಟ್ ಪಕ್ಷದ ಅಭ್ಯರ್ಥಿ ಎ.ದೇವದಾಸ ಅವರು ತಮ್ಮ ಹುಟ್ಟೂರಾದ ಸೋಮಸಮುದ್ರದಲ್ಲಿ ಬಿರುಸಿನ ಪ್ರಚಾರ ಕೈಗೊಂಡಿದ್ದರು.ಈ ಸಂದರ್ಭದಲ್ಲಿ ತಮ್ಮ ಸಂಬಂಧಿಕರು, ಸ್ನೇಹಿತರು, ಬೆಂಬಲಿಗರು ಮತ್ತಿತರನ್ನು ಭೇಟಿಯಾಗಿ ಬೆಂಬಲ ಕೇಳಿದರು.
ನಂತರ ಎ.ದೇವದಾಸ್ ಮಾತನಾಡಿದ ಈ ಬಾರಿ ಕಂಪ್ಲಿ ವಿಧಾನಸಭೆ ಕ್ಷೇತ್ರದಲ್ಲಿ ಬದಲಾವಣೆ ತರಲು ನನಗೆ ಮತ ನೀಡಿ,ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ನನ್ನ ಶಕ್ತಿಮೀರಿ ಕೆಲಸ ಮಾಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಸದಸ್ಯರಾದ ಗೋವಿಂದ್ ,ಸದಸ್ಯರಾದ ಪಂಪಾಪತಿ , ಪಾಲಾಕ್ಷ , ಮೈಲಾರ್, ಗೋವಿಂದಪ್ಪ ಮತ್ತಿತರರು ಉಪಸ್ಥಿತರಿದ್ದರು.