ಸಂಜೆವಾಣಿ ವಾರ್ತೆ
ಕಂಪ್ಲಿ :ಏ.18- ಕಂಪ್ಲಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಜೆ.ಎನ್. ಗಣೇಶ್ ಅವರು ಇಂದು ನಾಮಪತ್ರ ಸಲ್ಲಿಸಿದರು.
ಕಂಪ್ಲಿ ಪುರಸಭೆ ಕಾರ್ಯಾಲಯದಲ್ಲಿ ಚುನಾವಣಾ ಅಧಿಕಾರಿಯಾಗಿರುವ ಡಾ.ಎನ್.ನಯನಾ ಅವರಿಗೆ ನಾಮಪತ್ರ ಸಲ್ಲಿಸಿದರು.
ಇದಕ್ಕೂ ಮುನ್ನ ಪಕ್ಷದ ಬೆಂಬಲಿಗರು, ಕಾರ್ಯಕರ್ತರು ಸೇರಿಕೊಂಡು ಉದ್ಭವ ಗಣೇಶನ ದರ್ಶನ ಪಡೆದು ಮೆರವಣಿಗೆ ಮೂಲಕ ಪುರಸಭೆ ಕಾರ್ಯಾಲಯಕ್ಕೆ ಬಂದು ಜೆ.ಎನ್. ಗಣೇಶ್ ಅವರು ನಾಮಪತ್ರ ಸಲ್ಲಿಸಿದರು.
ಚುನಾವಣೆ ಹಿನ್ನಲೆಯಲ್ಲಿ ನೂರು ಮೀಟರನಲ್ಲಿ ಸಾರ್ವಜನಿಕರ ಓಡಾಟ ನಿಷೇಧಿಸಿತ್ತು. ನಿಷೇಧಿದ ಪ್ರದೇಶದ ಒಳಗೆ ಬಾರದಂತೆ ಮಿಲಿಟರಿ ಹಾಗೂ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಶ್ರೀನಿವಾಸ್ ರಾವ್, ಕೆ. ಷಣ್ಮುಕಪ್ಪ, ಬಿ.ಸದಾಶಿವಪ್ಪ ಇದ್ದರು.