
ಸಂಜೆವಾಣಿ ವಾರ್ತೆ
ಕೂಡ್ಲಿಗಿ. ಆ 3 :- ತಾಲೂಕಿನ ಕಕ್ಕುಪ್ಪಿ ಗ್ರಾಮಪಂಚಾಯಿತಿಯ ಎರಡನೇ ಅವಧಿಯ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ಇಂದು ನಿಗಧಿಪಡಿಸಿದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಿರುಪಾಪುರದ ಲಕ್ಷ್ಮೀದೇವಿವೀರನಗೌಡ ಹಾಗೂ ಉಪಾಧ್ಯಕ್ಷರಾಗಿ ಕಕ್ಕುಪ್ಪಿ ಹೆಚ್ ಹುಲುಗಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಗ್ರಾಮಪಂಚಾಯಿತಿ ಚುನಾವಣಾಧಿಕಾರಿಯಾಗಿರುವ ಕೂಡ್ಲಿಗಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಮೆಹಬೂಬ್ ಭಾಷಾ ಘೋಷಿಸಿದ್ದಾರೆ.
ಇಂದು ಬೆಳಿಗ್ಗೆ 10ಗಂಟೆಯಿಂದ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಒಟ್ಟು 13 ಸದಸ್ಯರ ಬಲಾಬಲ ಹೊಂದಿರುವ ಕಕ್ಕುಪ್ಪಿ ಗ್ರಾಮಪಂಚಾಯಿತಿಯ ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ವರ್ಗಕ್ಕೆ ಮೀಸಲಾತಿಯಂತೆ ವಿರುಪಾಪುರದ ಲಕ್ಷ್ಮೀದೇವಿವೀರನಗೌಡ ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದು ಹಾಗೂ ಅನುಸೂಚಿತ ಜಾತಿ ಮೀಸಲಿನ ಉಪಾಧ್ಯಕ್ಷ ಸ್ಥಾನಕ್ಕೆ ಕಕ್ಕುಪ್ಪಿ ಹೆಚ್ ಹುಲುಗಪ್ಪ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಇಬ್ಬರ ಆಯ್ಕೆಯನ್ನು ಅವಿರೋಧ ಆಯ್ಕೆ ಎಂದು ಘೋಷಿಸಿದ್ದಾರೆ ಒಟ್ಟು 13ಸದಸ್ಯರಲ್ಲಿ 11ಸದಸ್ಯರು ಹಾಜರಿದ್ದು ಇಬ್ಬರು ಗೈರಾಗಿರುವ ಮಾಹಿತಿ ತಿಳಿದಿದೆ.
ಈ ಸಂದರ್ಭದಲ್ಲಿ ಚುನಾವಣಾಧಿಕಾರಿಗಳಾಗಿ ಕೂಡ್ಲಿಗಿ ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಮಹಬೂಬ ಭಾಷಾ, ಸಹಾಯಕರಾಗಿ ಈಶಪ್ಪ, ವಾಸು ಸೇರಿದಂತೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿ ಇತರರು ಉಪಸ್ಥಿತರಿದ್ದರು. ಚುನಾವಣಾ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಕೂಡ್ಲಿಗಿ ಪೊಲೀಸರು ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದ್ದರು.
One attachment • Scanned by Gmail