ಕಚ್ಚಾ ತೈಲ ದುಬಾರಿ ಇಂಧನ ದರ ಏರಿಕೆಗೆ ಕಾರಣ

ನವದೆಹಲಿ, ಫೆ , 23-ಅಂತರ ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಿಂದಾಗಿ ದೇಶದಲ್ಲಿ ಇಂಧನ ಬೆಲೆ ಏರಿಕೆಯಾಗುತ್ತಿದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಫ್ರಧಾನ್ ಸ್ಪಷ್ಟಪಡಿಸಿದ್ದಾರೆ.

ದಿನದಿಂದ ದಿನಕ್ಕೆ ಇಂಧನ ದರ ಏರಿಕೆ ಯಾಗುತ್ರಿದ್ದರೂ ದರ ನಿಯಂತ್ರಣಕ್ಕೆ ಯಾವುದೇ ಕ್ರಮ ಪ್ರಸ್ತಾಪಿಸದೆ ದರ ಏರಿಕೆಗೆ ಕಾರಣ ಕೊಟ್ಟಿದ್ದಾರೆ.

ಅಂತರ ರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಳದಿಂದಾಗಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಇದು ಕ್ರಮೇಣ ಇಳಿಕೆಯಾಗಲಿದೆ ಎಂದು ಆಶಯ ವ್ಯಕ್ತಪಡಿಸಿದರು.

ಕೋವಿಡ್-19 ಇಂಧನ ಉತ್ಪಾದನೆ ಮೇಲೆ ಪರಿಣಾಮ ಬೀರುತ್ತಿರುವುದರಿಂದ ಜಾಗತಿಕ ಪೂರೈಕೆಯೂ ಕುಸಿದಿದೆ ಎಂದು ಸಚಿವರು ತಿಳಿಸಿದರು.

ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ವ್ಯಾಪಿಗೆ ತರಲು ಜಿಎಸ್‌ಟಿ ಕೌನ್ಸಿಲ್‌ಗೆ ನಿರಂತರವಾಗಿ ವಿನಂತಿಸುತ್ತಿದ್ದೇವೆ. ಇದರಿಂದ ಜನರಿಗೆ ಅನುಕೂಲವಾಗಲಿದೆ ಟ್ವೀಟ್ ಮಾಡಿದ್ದಾರೆ.