ಕಟೀಲ್ ಹೇಳಿಕೆಗೆ ಪ್ರಿಯಾಂಕ್ ತಿರುಗೇಟು

ಕಲಬುರಗಿ ಏ 4: ವಿಷಕಾರಿಯಾಗಿದ್ದರಿಂದಲೇ ಖರ್ಗೆ ಸೋತಿದ್ದಾರೆ ಎಂದು ಪ್ರತಿಹೇಳಿಕೆ ನೀಡಿರುವ ಬಿಜೆಪಿ ರಾಜ್ಯ ಅಧ್ಯಕ್ಷ ನಳೀನ್ ಕುಮಾರ ಕಟೀಲ್ ಅವರಿಗೆ ಖರ್ಗೆ ಅವರು ವಿಷಕಾರಿಯಾಗಿದ್ದರಿಂದಲೇ ನಮ್ಮ ಭಾಗಕ್ಕೆ 371(ಎ), ರೇಲ್ವೆ ಡಿವಿಜನ್, ಇಎಸ್‍ಐಸಿ ಆಸ್ಪತ್ರೆ, ಸೇರಿದಂತೆ ಹಲವಾರು ಅಭಿವೃದ್ದಿ ಯೋಜನೆಗಳು ಜಾರಿಗೊಂಡಿವೆ ಎಂದು ಮಾಜಿ ಸಚಿವ, ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಗಿ ಕುಟುಕಿದ್ದಾರೆ.
ಕಟೀಲ್ ಅವರ ಹೇಳಿಕೆಗೆ ತೀಕ್ಣವಾಗಿ ಪ್ರತಿಕ್ರಿಯೆ ನೀಡಿ ಪ್ರಿಯಾಂಕ್ ಖರ್ಗೆ ಟ್ವಿಟ್ ಮಾಡಿದ್ದಾರೆ.
ಮಕರಂದ ಸೂಸುವ ಬಿಜೆಪಿಯಿಂದ ಕಲಬುರಗಿ ಜಿಲ್ಲೆಗೆ ಒಂದು ಸಚಿವ ಸ್ಥಾನವೂ ಸಿಗಲಿಲ್ಲ.ಬಿಜೆಪಿಯಿಂದ ಅನುದಾನ ಹಾಗೂ ಪ್ರತ್ಯೇಕ ರೇಲ್ವೆ ವಿಭಾಗ ಬಿಡಿ, ಒಂದೂ ರೈಲನ್ನು ನಿಲ್ಲಿಸಲು ಸಹ ಆಗಲಿಲ್ಲ. ಬಿಜೆಪಿಯವರ ಮಕರಂದದ ಸುವಾಸನೆಗೆ ಹಿಂದಿನ ಸರ್ಕಾರದ ಯೋಜನೆಗಳೆಲ್ಲ ರದ್ದಾಗಿವೆ ಎಂದಿದ್ದಾರೆ.
ಸಚಿವ ಕೆ.ಎಸ್. ಈಶ್ವರಪ್ಪ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ಸಿಎಂ ವಿರುದ್ಧದ ಹೇಳಿಕೆಗಳನ್ನು ಪ್ರಸ್ತಾಪಿಸಿರುವ ಪ್ರಿಯಾಂಕ್ ಖರ್ಗೆ, ಈಶ್ವರಪ್ಪ ಹಾಗೂ ಯತ್ನಾಳ್ ವಿರುದ್ದ ಕ್ರಮ ಕೈಗೊಳ್ಳಲಾಗದಂತಹ ದುರ್ಬಲ ಅಧ್ಯಕ್ಷ ಎಂದು ಕಟೀಲ್ ಅವರನ್ನು ಟೀಕಿಸಿದ್ದಾರೆ.