ಕಟ್ಟಡದ ಮೇಲಿಂದ ಬಿದ್ದು ಮಗು ಸಾವು

ಬೆಂಗಳೂರು,ಮಾ.೧೫-ಕಟ್ಟಡದ ಮೇಲಿಂದ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಚಾಮರಾಜಪೇಟೆಯ ಆಜಾದ್ ನಗರದ ೬ನೇ ಕ್ರಾಸ್‌ನಲ್ಲಿ ನಡೆದಿದೆ.
ಒಂದೂವರೆ ವರ್ಷದ ದೀಕ್ಷಾ ಮಹಡಿ ಮೇಲಿಂದ ಬಿದ್ದು ಸಾವನ್ನಪ್ಪಿದ ಮಗು. ವಿನಯ್ ಎಂಬ ದಂಪತಿಯ ಪುತ್ರಿ ದೀಕ್ಷಾ, ಸ್ನೇಹಿತರ ಮನೆಗೆ ಬಂದಿದ್ದ ವೇಳೆ ಅವಘಡ ಸಂಭವಿಸಿ ಗಂಭೀರವಾಗಿ ಗಾಯಗೊಂಡಿದೆ. ಕೂಡಲೇ ಮಗುವನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದೆ. ರಾತ್ರಿ ೯ ಗಂಟೆ ಸುಮಾರಿಗೆ ಊಟ ಮಾಡಿಸುತ್ತಿದ್ದ ದೀಕ್ಷಾ ತಾಯಿ. ಆ ವೇಳೆ ಆಟವಾಡುತ್ತ ಗ್ರಿಲ್ಸ್ ಮೇಲೆ ಮಗು ಹತ್ತಿದೆ. ಬಳಿಕ ನೋಡ ನೋಡುತ್ತಿದ್ದಂತೆ ಜಾರಿ ಕೆಳ ಬಿದ್ದಿದ್ದು, ಆಸ್ಪತ್ರೆ ಮಾರ್ಗ ಮಧ್ಯೆ ಮಗು ಕೊನೆಯುಸಿರೆಳೆದಿದೆ. ಚಾಮರಾಜಪೇಟೆ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ