ಕಟ್ಟಡ ಕಾರ್ಮಿಕರಿಗೆ 10,000 ಪರಿಹಾರ ಘೋಷಣೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ,ಮೇ.21- ಪ್ರತಿ ತಿಂಗಳು 10 ಸಾವಿರ ರೂ.ಗಳಂತೆ ಮೂರು ತಿಂಗಳ ಕಾಲ ರಾಜ್ಯದ ಎಲ್ಲ ವಿಧಗಳ ಕಟ್ಟಡ ಕಾರ್ಮಿಕ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಷನ್ ನೇತೃತ್ವದಲ್ಲಿಂದು ಪ್ರತಿಭಟನೆಯ ಮೂಲಕ ಸರ್ಕಾರಕ್ಕೆ ಒತ್ತಾಯಿಸಲಾಯಿತು.
ಕೋವಿಡ್ -19 ಎರಡನೆ ಅಲೆಯ ಲಾಕ್‍ಡೌನ್ ಘೋಷಣೆಯಿಂದ ರಾಜ್ಯದ ನೋಂದಾಯಿತ ಮತ್ತು ವಲಸೆ ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕುಟುಂಬಗಳಿಗೆ ಘೋಷಿಸಲಾಗಿರುವ 3000 ರೂ.ಗಳ ನೆರವನ್ನು 10 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು ಎಂಬ ಪ್ರಮುಖ ಬೇಡಿಕೆಯ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮುಖಾಂತರ ಕಾರ್ಮಿಕರ ಸಚಿವರಿಗೆ ಸಲ್ಲಿಸಲಾಯಿತು.
ಕೋವಿಡ್ ನಿಯಮನುಸಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕೈಗೊಂಡ ಪ್ರತಿಭಟನಾ ಪ್ರದರ್ಶನದಲ್ಲಿ ಶ್ರೀಮಂತ ಬಿರಾದಾರ, ನಾಗಯ್ಯಾ ಜಿ.ಸ್ವಾಮಿ, ಸುಧಾಮ ಧನ್ನಿ, ಪ್ರಕಾಶ ತಾಲಮಡಗಿ ಸೇರಿದಂತೆ ಹಲವರು ಭಾಗವಹಿಸಿದ್ದರು.