ಕಟ್ಟಡ ಕಾರ್ಮಿಕ ಇಲಾಖೆಯ ಅವ್ಯವಹಾರ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ,ಜು.5- ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಕಿಟ್ ವಿತರಣೆ ಸೇರಿದಂತೆ ವಿವಿಧ ಯೋಜನೆಗಳಲ್ಲಿ ನಡೆದಿರುವ ಅವ್ಯವಹಾರದ ತನಿಖೆ ಕೈಗೊಳ್ಳುವಂತೆ ಆಗ್ರಹಿಸಿ ಜೈಕನ್ನಡಿಗರ ಸೇನೆ ನೆತೃತ್ವದಲ್ಲಿ ಪ್ರತಿಭಟನೆ ಕೈಗೊಳ್ಳಲಾಯಿತು.
ಕಟ್ಟಡ ಕಾರ್ಮಿಕರ ಪ್ರಾದೇಶಿಕ ಆಯುಕ್ತರ ಕಚೇರಿ ಉಪ ಕಾರ್ಮಿಕ ಆಯುಕ್ತರಿಗೆ ಬೇಡಿಕೆಯ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಕಟ್ಟಡ ಕಾರ್ಮಿಕ ಮಕ್ಕಳ ಶಿಷ್ಯ ವೇತನ, ಶೈಕ್ಷಣಿಕ ಕಿಟ್, ವಿವಾಹ ಸಹಾಯ ದನ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಅವ್ಯವಹಾರ ನಡೆದಿದ್ದು, ತನಿಖೆ ಕೈಗೊಂಡು ಸೂಕ್ತ ಕ್ರಮ ಜರುಗಿಸುವಂತೆ ಆಗ್ರಹಿಸಲಾಯಿತು.
ಪ್ರತಿಭಟನೆಯಲ್ಲಿ ಸೇನೆ ರಾಜ್ಯಾಧ್ಯಕ್ಷ ದತ್ತು ಭಾಸಗಿ, ರಾಮಾ ಪೂಜಾರಿ, ಹುಸೇನ, ಅನೀಲ ವಿದ್ಯಾನಗರ, ಮಲ್ಲಿಕಾರ್ಜುಣ ಆಲಗೂಡ, ಆಕಾಶ ಚವ್ಹಾಣ, ಆನಂದ ಕೋಳ್ಳೂರ ಸೇರಿದಂತೆ ಹಲವರಿದ್ದರು.