ಕಟ್ಟಡ ಪರಿಶೀಲಿಸಿದ ಜಿಲ್ಲಾಧಿಕಾರಿ


ಹೊಸಪೇಟೆ(ವಿಜಯನಗರ)ಜು.13: ಹೊಸಪೇಟೆಯ ಹಳೆ ತಾಲೂಕು ಕಚೇರಿ ಕಟ್ಟಡ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು ಮಂಗಳವಾರದಂದು ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಪಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಅವರು ತಹಶೀಲ್ದಾರ್ ವಿಶ್ವಜೀತ ಮೇಹತ ಅವರಿಂದ ಕಟ್ಟಡದ ಬಗ್ಗೆ ಮಾಹಿತಿ ಪಡೆದು ಅಲ್ಲಿನ ಅನುಪಯುಕ್ತ ಸಾಮಾಗ್ರಿಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಅವರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಉಪತಹಶೀಲ್ದಾರ್ ಅಮರನಾಥ್, ಶಿರಸ್ತೇದಾರರಾದ ರಮೇಶ್, ಶ್ರೀಧರ್, ಹೊಸಪೇಟೆಯ ಕಂದಾಯ ನಿರೀಕ್ಷಕ ಮಲ್ಲಿಕಾರ್ಜುನ್ ಗೌಡ, ಕಮಲಾಪುರದ ಪ್ರಭಾರಿ ಕಂದಾಯ ನಿರೀಕ್ಷಕ ಅನಿಲ್‍ಕುಮಾರ್ ಇದ್ದರು.

Attachments area