ಕಠಿಣ ಕ್ರಮಕ್ಕೆ ಅವಕಾಶ ಕೊಡಬೇಡಿ: ಸಾರಿಗೆ ನೌಕರರಿಗೆ ಸಿಎಂ ಮನವಿ

ಹುಬ್ಬಳ್ಳಿ, ಏ 6- ಸಾರಿಗೆ ನೌಕರರ ಎಂಟು ಬೇಡಿಕೆಗಳನ್ನು ಈಡೇರಿಸಲಾಗಿದೆ ಕಠಿಣ ಕ್ರಮಕ್ಕೆ ಅವಕಾಶ ನೀಡಬೇಡಿ ಎಂದು ನೌಕರರಿಗೆ ಮುಖ್ಯಮಂತ್ರಿ ಬಿ.ಎಸ್.‌ಯಡಿಯೂರಪ್ಪ ಮನವಿ ಮಾಡಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರು ಮುಷ್ಕರ ಮುಂದುವರೆಸಿದರೆ ರೈಲು ಸಂಚಾರ, ಖಾಸಗಿ ವಾಹನಗಳನ್ನು ಹೆಚ್ಚಿಸಿ ಪರ್ಯಾಯ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ಆರನೇ ವೇತನ ಆಯೋಗ ಜಾರಿಗೊಳಿಸಬೇಕೆಂದು ಪಟ್ಟುಹಿಡಿದಿರುವ ಸಾರಿಗೆ ನೌಕರರು ಮುಷ್ಜರ ನಡೆಸಲು ಮುಂದಾಗಿದ್ದಾರೆ. ಆದರೆ ಆರನೇ ವೇತನ ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಸರ್ಕಾರ ಸ್ಪಷ್ಟ ಪಡಿಸಿತ್ತು.
ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ತಪ್ಪಿಸಲು ಖಾಸಗಿ ವಾಹನವನ್ನು ಸೇವೆಗೆ ಬಳಸಿಕೊಳ್ಳಲು ನಿರ್ಧರಿಸಿದೆ. ಮುಷ್ಕರ ಹಾದಿ ತುಳಿದರೆ ಎಸ್ಮಾ ಜಾರಿಗೊಳಿಸುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ.