ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ


ಹುಬ್ಬಳ್ಳಿ,ಮೇ.23: ಬೆಂಗಳೂರಿನಲ್ಲಿ ಕಾರ್ಯನಿರತ ಛಾಯಾಗ್ರಾಹಕರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೇ ಅವರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹುಬ್ಬಳ್ಳಿ ಫೆÇೀಟೋ ಮತ್ತು ವಿಡಿಯೋಗ್ರಾಫರ್ಸ್ ಸಂಘದ ಪದಾಧಿಕಾರಿಗಳು ಗುರುವಾರ ನಗರದ ಮಿನಿವಿಧಾನ ಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಕ್ಯಾಮರಾ ಸಲಕರಣೆಗಳನ್ನು ನಾಶ ಮಾಡಿದ್ದು ಖಂಡನೀಯ, ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ವೃತ್ತಿನಿರತ ಛಾಯಾಗ್ರಹಕರಿಗೆ ರಕ್ಷಣೆ ನೀಡಬೇಕು. ಹಲ್ಲೆ ಮಾಡಿರುವ ತಪ್ಪಿತಸ್ಥರಿಗೆ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಹಲ್ಲೆಗೊಳಗಾದ ಛಾಯಾಗ್ರಾಹಕರಿಗೆ ರಾಜ್ಯ ಸರ್ಕಾರ ಸೂಕ್ತ ಪರಿಹಾರವನ್ನು ನೀಡಬೇಕು. ಇಂಥಹ ಪ್ರಕರಣಗಳು ರಾಜ್ಯದಲ್ಲಿ ಮರುಕಳಿಸದಂತೆ ಸರ್ಕಾರ ಭದ್ರತೆಯನ್ನು ನೀಡಬೇಕು ಎಂದು ನಗರದ ತಹಶಿಲ್ದಾರ ಮೂಲಕ ಪ್ರತಿಭಟನಾಕಾರರು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಹುಬ್ಬಳ್ಳಿ ಎಚ್.ಪಿ.ಮತ್ತು ವಿ.ಪಿ ಅಧ್ಯಕ್ಷರಾದ ಕಿರಣ್ ಬಾಕಳೆ, ಕಾರ್ಯದರ್ಶಿ ರವೀಂದ್ರ ಕಾಟೇಗರ ಮೊದಲಾದವರು ಉಪಸ್ಥಿತರಿದ್ದರು.