ಕಠಿಣ ನಿಯಮ ಜೂ.30ರವರೆಗೆ ವಿಸ್ತರಣೆ: ಪಾಸಿಟಿವ್ ಪ್ರಕರಣ‌ ಇಳಿಕೆಗೆ ಕೇಂದ್ರ ಸೂಚನೆ

ನವದೆಹಲಿ, ಮೇ.27-ದೇಶದಲ್ಲಿ ಕೋವಿಡ್ ಸೋಂಕು ತಡೆಗಟ್ಟಲು ಅನುಕೂಲವಾಗುವಂತೆ ಕಂಟೋನ್ಮೆಂಟ್ ನಿಯಮ ಹಾಗು ಬಿಗಿ ಕ್ರಮಗಳನ್ನು ಜೂನ್ 30 ರವೆಗೆ ಕೇಂದ್ರ ಗೃಹ ಸಚಿವಾಲಯ ವಿಸ್ತರಣೆ ಮಾಡಿದೆ.

ದೇಶದಲ್ಲಿ ಪಾಸಿಟೀವ್ ಪ್ರಕರಣ‌‌ ಕಡಿಮೆ ಮಾಡುವ ನಿಟ್ಟಿನಲ್ಲಿ ಬಿಗಿ ಕ್ರಮ ಕೈಗೊಳ್ಳಿ ಎಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಏಪ್ರಿಲ್ 29 ರಂದು ಹೊರಡಿಸಿದ್ದ ಆದೇಶವನ್ನು ಜೂನ್ 30 ರ ವರೆಗೆ ವಿಸ್ತರಿಸಿರಣೆ ಮಾಡಿರುವ ಕೇಂದ್ರ ಗೃಹ ಸಚಿವಾಲಯ ದೇಶದಲ್ಲಿ ಪಾಸಿಟಿವ್ ಪ್ರಕರಣ ಕಡಿಮೆ ಮಾಡುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಬಲ್ಲಾ ಅವರು,ದೇಶದಲ್ಲಿ ಕೈಗೊಂಡ ಬಿಗಿ ಕ್ರಮಗಳಲ್ಲಿ ಉತ್ತರ,ದಕ್ಷಿಣ, ಈಶಾನ್ಯ ಭಾಗ ಸೇರಿದಂತೆ ಎಲ್ಲೆಡೆ ಸೋಂಕು ಮತ್ತು ಸಾವು ಪ್ರಕರ ಇಳಿಕೆಯಾಗುತ್ತಿದೆ.ಮುಂದಿನ ದಿನಗಳಲ್ಲಿ ಮತ್ತಷ್ಟು ಕಡಿಮೆ ಮಾಡಲು ಕ್ರಮ ಕೈಗೊಳ್ಳಿ ಎಂದು ಸೂಚಿಸಿದ್ದಾರೆ.

ದೇಶದಲ್ಲಿ ಸೋಂಕು ಸಂಖ್ಯೆ ಇಳಿಮುಖವಾಗುತ್ತಿದೆ ಆದರೆ ಸಕ್ರಿಯ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ .ಅದನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಬಿಗಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.

ಸೋಂಕು ಇಳಿಕೆಯಾಗುತ್ತಿದ್ದರೂ ಕೆಲವು ರಾಜ್ಯಗಳಲ್ಲಿ ದಿನನಿತ್ಯ ಸೋಂಕಿನ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗುತ್ತಿದೆ ಅಂತಹ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಂಟೋನ್ಮೆಂಟ್ ಮಾದರಿಯಲ್ಲಿ ಬಿಗಿ‌ಕ್ರಮಗಳನ್ನು ಕೈಗೊಳ್ಳುವ ಮೂಲಕ ಸೋಂಕು ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಜಿಲ್ಲೆಗಳಲ್ಲಿ ಬಿಗಿ ಕ್ರಮಕ್ಕೆ ಸೂಚನೆ:

ದೇಶದ ಹಲವು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಪ್ರಕರಣ ಶೇಕಡ ಹತ್ತಕ್ಕಿಂತಲೂ ಹೆಚ್ಚಿರುವ ಕಡೆ ಬಿಗಿ ಕ್ರಮಗಳನ್ನು ಕೈಗೊಂಡು ಅದನ್ನು ಕಡಿಮೆ ಮಾಡಲು ಮುಂದಾಗಿ ಎಂದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಅವರು ಸೂಚನೆ ನೀಡಿದ್ದಾರೆ.

ಕಳೆದ ಒಂದು ವಾರದ ಈಚೆಗೆ ಹಲವು ಜಿಲ್ಲೆಗಳಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಅಂತಹ ಜಿಲ್ಲೆಗಳಲ್ಲಿ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಅನಿವಾರ್ಯತೆ ಇದೆ ಎಂದು ರಾಜ್ಯಗಳಿಗೆ ಸೂಚನೆ ನೀಡಿದ್ದಾರೆ.