ಕಡಲು ಕೊರೆತಕ್ಕೆ ಶಾಶ್ವತ ಪರಿಹಾರ: ಸಿದ್ದು ಭರವಸೆ

ದಕ್ಷಿಣ ಕನ್ನಡ: ಆ .1-ಉಡುಪಿ, ಮಂಗಳೂರು ಹಾಗೂ ಕಾರವಾರ ಜಿಲ್ಲೆಗಳಲ್ಲಿ ಉಂಟಾಗುತ್ತಿರುವ ಕಡಲು ಕೊರೆತಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸೋಮೇಶ್ವರ ಬಟ್ಟಪಾಡಿಯಲ್ಲಿ ಇಂದು ಸಮುದ್ರ ಕೊರೆತದ ವೀಕ್ಷಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಬಟ್ಟಪಾಡಿಯಲ್ಲಿ ಮನೆಗಳಿಗೆ ಹಾನಿಯಾಗಿವೆ ಎಂದು ತಿಳಿಸಿದರು.
ಕಳೆದ ವರ್ಷವೂ ಕಡಲ ಕೊರೆತವಾಗಿದ್ದು, ಈ ವರ್ಷವೂ ಆಗಿದೆ. ಕಲ್ಲುಗಳನ್ನು ಹಾಕಿ ಕೇವಲ ತಾತ್ಕಾಲಿಕವಾಗಿ ಪರಿಹಾರ ಕಂಡುಕೊಳ್ಳಲಾಗಿದೆ. ಪದೇ ಪದೇ ಕಡಲ ಕೊರೆತ ಉಂಟಾಗುತ್ತಲೇ ಇರುತ್ತದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದರು.
ಕಡಲು ಕೊರೆತದಿಂದ ಸಂಕಷ್ಟಕ್ಕೆ ಸಿಲುಕಿರುವ ಮೀನುಗಾರರಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದರು.