ಕಡ್ಡಾಯವಾಗಿ ಪ್ರತಿಯೊಬ್ಬರೂ ಮತದಾನ ಮಾಡಿ ಪ್ರಜಾಪ್ರಭುತ್ವವನ್ನು ಗೆಲ್ಲಿಸಿ : ಜಿಲ್ಲಾಧಿಕಾರಿ ಸ್ನೇಹಲ್.ಆರ್

ಯಾದಗಿರಿ : ಮೇ 06 : ಕಡ್ಡಾಯವಾಗಿ ಪ್ರತಿಯೊಬ್ಬರೂ ಮತದಾನ ಮಾಡಿ ಪ್ರಜಾಪ್ರಭುತ್ವವನ್ನು ಗೆಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್.ಆರ್ ಅವರು ಅಭಿಪ್ರಾಯಪಟ್ಟರು.

 ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ವಿಧಾನಸಭಾ ಚುನಾವಣೆ ಅಂಗವಾಗಿ ಜಿಲ್ಲಾ ಕ್ರೀಡಾಂಗಣದ ಈಜುಕೊಳದಲ್ಲಿ  ವಿಕಲಚೇತನರ ಈಜುವ ಸ್ಪರ್ಧೆಯ ಮೂಲಕ ವಿನೂತನ ಮತದಾನ ಕುರಿತ ಜನಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

 ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಕುರಿತು ಪಾರದರ್ಶಕತೆ ಹಾಗೂ ಮತದಾನದಲ್ಲಿ ಸಕ್ರಿಯ ಭಾಗವಹಿಸುವಿಕೆಯಿಂದ ಮಾತ್ರ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬಹುದು ಎಂದರು.

 ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗರಿಮಾ ಪನ್ವಾರ್, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾಧಿಕಾರಿ ಸಾಧಿಕ್ ಹುಸೇನ್ ಖಾನ್, ಕ್ರೀಡಾ ಇಲಾಖಾಧಿಕಾರಿ ರಾಜು ಬಾವಿಹಳ್ಳಿ, ಜಿಲ್ಲಾ ಎನ್ ಆರ್ ಡಿ ಎಮ್ ಎಸ್ ಕೇಂದ್ರದ ಅಧಿಕಾರಿ ಸಿದ್ದರೆಡ್ಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.