ಕಡ್ಡಾಯವಾಗಿ ಮತದಾನ ಮಾಡೋಣ

ಗದಗ,ಏ4: ಭಾರತವು ಜಗತ್ತಿನ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಿಮ್ಮ ಮತಕ್ಕೆ ಪ್ರಜಾಪ್ರಭುತ್ವ ಹಾಗೂ ರಾಷ್ಟ್ರಪತಿಗಳ ಮತಕ್ಕೆ ಒಂದೇ ಮೌಲ್ಯವಿದೆ. ಹಾಗಾಗಿ ಮತದಾನ ಮಾಡುವಾಗ ನಿಮ್ಮ ಮಕ್ಕಳ ಭವಿಷ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಮತದಾನ ಮಾಡಿ ಎಂದು ಗದಗ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಸವರಾಜ್ ಅಡವಿಮಠ ಹೇಳಿದರು.
ಗದಗ ತಾಲ್ಲೂಕಿನ ಅಂತೂರ ಗ್ರಾಮದಲ್ಲಿ 2023-24 ನೇ ಸಾಲಿನ ನರೇಗಾ ಯೋಜನೆಯಡಿ ಪ್ರಗತಿಯಲ್ಲಿರುವ ಸಮುದಾಯ ಬದು ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಕಡ್ಡಾಯ ಮತದಾನದ ಪ್ರತಿಜ್ಞಾ ಕಲ್ಪಿಸಿರುವ ವಿಧಿ ಬೋಧಿಸಲಾಯಿತು.
ನಂತರ ಮಾತನಾಡಿದ ಅವರು, ನಿಮ್ಮ ಮತವನ್ನು ಮಾರಿಕೊಳ್ಳದೇ ನಿಮ್ಮ ಅಭಿವೃದ್ಧಿಗೆ ಶ್ರಮಿಸುವವರಿಗೆ ಹಾಗೂ ನಿಮ್ಮ ಮಕ್ಕಳ ಜೀವನದ ಒಳಿತಿಗಾಗಿ ಕಡ್ಡಾಯವಾಗಿ ಮತದಾನ ಮಾಡಿ ಎಂದು ಹೇಳಿದರು.
80ವರ್ಷ ಮೇಲ್ಪಟ್ಟ, ದಿವ್ಯಾಂಗರಿಗೆ ಮನೆಯಿಂದಲೇ ಮತದಾನ:
2023 ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಹಾಗೂ ದಿವ್ಯಾಂಗರಿಗಾಗಿ ಹಾಗೂ ಮನೆಯನ್ನು ಬಿಟ್ಟು ಹೊರಗಡೆ ಬರಲು ಆಗದಂತಹ ವ್ಯಕ್ತಿಗಳಿಗೆ ಮನೆಯಲ್ಲಿಯೇ ಮತದಾನ ಮಾಡಲು ಚುನಾವಣಾ ಆಯೋಗವು ಅವಕಾಶ ಮಾಡಿಕೊಟ್ಟಿದೆ. ಚುನಾವಣಾ ಆಯೋಗ ಕಲ್ಪಿಸಿರುವ ಸೌಲಭ್ಯದ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಗದಗ ತಾಲೂಕಿನ ಸಹಾಯಕ ನಿರ್ದೇಶಕ (ಗ್ರಾ.ಉ) ಕೃಷ್ಣಪ್ಪ ಧರ್ಮರ, ಅಂತೂರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೆಚ್, ಎಸ್, ಚಟ್ರಿ, ಸೇರಿದಂತೆ ಪಂಚಾಯತ ಸಿಬ್ಬಂದಿಗಳು ಹಾಜರಿದ್ದರು.