
ರೋಣ,ಮೇ9: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನಲೆ ಮತದಾರಿಗೆ ಮತದಾನದ ಜಾಗೃತಿಗಾಗಿ ಗದಗ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲೆಯಾದ್ಯಂತ ಏಕಕಾಲಕ್ಕೆ ಒಂದು ಲಕ್ಷ ಮತದಾರರ ಪ್ರತಿಜ್ಞಾ ವಿಧಿ ಬೋಧಿಸುವ ಮೂಲಕ ವಿಭಿನ್ನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಹಿನ್ನಲೆ ರೋಣ ತಾಲೂಕಿನ ಪ್ರತಿ ಗ್ರಾಮ ಪಂಚಾಯತಿಯಲ್ಲೂ ಮತದಾನ ಜಾಗೃತಿಗಾಗಿ ವಿಭಿನ್ನ ವಾಗಿರುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಮತ್ತು ಬೆಳಿಗ್ಗೆ 9:30 ಕ್ಕೆ ಏಕಕಾಲಕ್ಕೆ ಪ್ರತಿಜ್ಞಾ ವಿಧಿ ಭೋದಿಸಲಾಯಿತು. ಅದರಲ್ಲಿ ಅಬ್ಬಿಗೇರಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮಗಳು ಹಲವು ವಿಶೇಷತೆಗೆ ಸಾಕ್ಷಿಯಾದವು.
ಅಬ್ಬಿಗೇರಿ ಗ್ರಾಮದ ನರೇಗಾ ಕಾಮಗಾರಿ ಸ್ಥಳದಲ್ಲಿ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಿದ್ದ ಕಡ್ಡಾಯ ಮತದಾನ ಜಾಗೃತಿ ಕಾರ್ಯಕ್ರಮವು ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ವಾಗೀಶ ಶಿವಾಚಾರ್ಯ ಅವರ ನೇತ್ರತ್ವದಲ್ಲಿ ನಡೆಯಿತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಸಂವಿಧಾನವು ಎಲ್ಲರಿಗೂ ಮತದಾನದ ಹಕ್ಕನ್ನು ನೀಡಿದೆ ಕಾರಣ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಮ್ಮ ನಾಯಕನನ್ನು ತಾವು ಆಯ್ಕೆ ಮಾಡಿಕೊಳ್ಳಬೇಕು ಅಂತಾ, ನಿಮ್ಮ ನಾಯಕನ ಆಯ್ಕೆ ಮಾಡಲು ನೀವು ಎಲ್ಲರೂ ಕಡ್ಡಾಯ ಮತದಾನ ಮಾಡಿ ಅಂದಾಗ ಮಾತ್ರ ಪ್ರಜಾಪ್ರಭುತ್ವ ಗೆಲ್ಲುತ್ತದೆ ಅಂತಾ ಅಭಿಪ್ರಾಯ ಪಟ್ಟರು. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಮತದಾರರು ನಿರ್ಭೀತಿಯಿಂದ ಮತ ಚಲಾಯಿಸಬೇಕು ಸದೃಢ ಪ್ರಜಾಪ್ರಭುತ್ವಕ್ಕೆ ಯುವಕರ ಮತ ಮುಖ್ಯ ಎಂದರು.
ರೋಣ ತಾಲೂಕ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ರವಿ.ಎ.ಎನ್ ಮಾತನಾಡಿ ವಿಶೇಷ ಚೇತನರಿಗೆ ಮತಗಟ್ಟೆಗೆ ಬಂದು ಮತ ಹಾಕಿ ಹೋಗುವುದಕ್ಕೆ ವಾಹನದ ವ್ಯವಸ್ಥೆ ಕೂಡ ಮಾಡಲಾಗಿದೆ ಹಾಗೂ ಮತಗಟ್ಟೆ ಕೇಂದ್ರದಲ್ಲಿ 60 ವರ್ಷ ಮೇಲ್ಪಟ್ಟಂತವರು ಹಾಗೂ ವಿಶೇಷ ಚೇತನರಿಗೆ ನೆರಳು ಗಾಳಿ ಕುಡಿಯಲು ನೀರಿನ ವ್ಯವಸ್ಥೆ ಕೂಡ ಮಾಡಲಾಗಿರುತ್ತದೆ. ಹಿರಿಯ ನಾಗರಿಕರಿಗೆ ಮತದಾನ ಮಾಡಲು ಪ್ರತ್ಯೇಕವಾದ ವ್ಯವಸ್ಥೆ ಮತಗಟ್ಟೆ ಕೇಂದ್ರದಲ್ಲಿ ಮಾಡಲಾಗಿದ್ದು, ಶೇ. 100 ರಷ್ಟು ಮತ ಚಲಾಯಿಸಿ ಪ್ರಜಾಪ್ರಭುತ್ವ ಗೆಲ್ಲಿಸಬೇಕು. ದೇಶ, ನಾಡು ಕಟ್ಟುವಲ್ಲಿ ಪ್ರತಿಯೊಬ್ಬರ ಮತ ಮುಖ್ಯವಾಗಿದ್ದು, ಯಾರೊಬ್ಬರೂ ಮತದಾನ ಮಾಡಲು ನಿಷ್ಕಾಳಜಿ ತೋರಬಾರದು. ಚುನಾವಣೆ ಎಂಬುದು ಪ್ರಜಾತಂತ್ರದ ಹಬ್ಬವಾಗಿದೆ ಎಂದರು.
ಪ್ರತಿಜ್ಞಾವಿಧಿ ಸ್ವೀಕಾರ: ಮೇ 10 ರಂದು ನಡೆಯಲಿರುವ ಚುನಾವಣೆ ಯಲ್ಲಿ ಎಲ್ಲರೂ ಕಡ್ಡಾವಾಗಿ ಮತದಾನ ಮಾಡುವ ಕುರಿತಾದ ಮತದಾನ ಪ್ರತಿಜ್ಞಾವಿಧಿಯನ್ನು ಒಂದು ಸಾವಿರಕ್ಕೂ ಹೆಚ್ಚು ಜನ ಕೂಲಿ ಕಾರ್ಮಿಕರಿಗೆ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಾಲಾಶ್ರೀ ಅಮ್ಮನ್ನವರ ಬೋಧಿಸಿದರು.
ಬೃಹತ್ ಸರಪಳಿ ನಿರ್ಮಾಣ: ಮತದಾನ ಜಾಗೃತಿ ಮೂಡಿಸಲು ಜಿಲ್ಲಾ ಸ್ವೀಪ್ ಸಮಿತಿಯ ಹಲವು ಬಗೆಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದಲ್ಲಿ ನರೇಗಾ ಕೂಲಿ ಕಾರ್ಮಿಕರೊಂದಿಗೆ ಅಧಿಕಾರಿಗಳು, ಸಿಬ್ಬಂದಿಗಳನ್ನು ಒಳಗೊಂಡ ಒಂದು ಬೃಹತ್ ವೃತ್ತ ನಿರ್ಮಾಣ ಅದರೊಳಗೆ “ಮೈ ವೋಟ್ ಮೈ ರೈಟ್” “ನಮ್ಮ ಮತ ನಮ್ಮ ಹಕ್ಕು” ಎಂಬ ಘೋಷ ವಾಕ್ಯವನ್ನು ಹೇಳಿಸಲಾಯಿತು
ವಿವಿಧೆಡೆ ರ್ಯಾಲಿ: ಗ್ರಾಮದಲ್ಲಿ ಬೈಕ್ ರ?ಯಾಲಿಯನ್ನು ಏರ್ಪಡಿಸಲಾಗಿತ್ತು ರ?ಯಾಲಿಯು ರೋಣ ರಸ್ತೆಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಶಾಲೆಯಿಂದ ಆರಂಭವಾಗಿ ಗ್ರಾಮದ ಬಸ್ ನಿಲ್ದಾಣ, ಗಾಂಧಿ ಸರ್ಕಲ್, ಪಂಚಾಯತ ಅವರಣ ಸೇರಿದಂತೆ ಅನ್ನದಾನೇಶ್ವರ ಮಠದ ಬಳಿ ಮುಕ್ತಾಯವಾಯಿತು.
ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೆಶಕ ರೀಯಾಜ ಖತೀಬ್, ತಾಲೂಕ ಪಂಚಾಯತ ತಾಂತ್ರಿಕ ಸಹಾಯಕ ಪ್ರವೀಣ ಸೂಡಿ, ಐಇಸಿ ಮಂಜುನಾಥ, ಪಂಚಾಯತ ಸಿಬ್ಬಂದಿ, ನರೇಗಾ ಸಿಬ್ಬಂದಿ, ಗ್ರಾಮ ಪಂಚಾಯತ ಸಿಬ್ಬಂದಿ, ನರೇಗಾ ಕೂಲಿಕಾರರು ಭಾಗವಹಿಸಿದ್ದರು.