ಕಡ್ಡಾಯವಾಗಿ ಮಾಸ್ಕ ಧರಿಸಲು ಮನವಿ

ಗಂಗಾವತಿ ಏ 21 : ಕರೋನ ಎರಡನೇ ಅಲೆ ಜಿಲ್ಲೆಯಲ್ಲಿ ಹೆಚ್ಚಾಗಿದೆ. ಈ ಹಿನ್ನೆಲೆ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ ಧರಿಸಬೇಕು ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷ ಮಹಮ್ಮದ್ ರಫಿ ಹೇಳಿದರು.
ತಾಲೂಕಿನ ಶ್ರೀರಾಮನಗರ ದಲ್ಲಿ ಗ್ರಾಮ ಪಂಚಾಯತಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿದಿನ ಮಾಸ್ಕ್ ಧರಿಸಿ ಕುರಿತು ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೋವಿಡ್-19 ಮಾರ್ಗಸೂಚಿ ಪಾಲನೆ ಮಾಡಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದರು.
ಗ್ರಾ.ಪಂ ಕಚೇರಿಯಿಂದ ಆರಂಭವಾದ ಜಾಥಾ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಾರ್ವಜನಕರಲ್ಲಿ ಜಾಗೃತಿ ಮೂಡಿಸಲಾಯಿತು.
ಈ ವೇಳೆ ಗ್ರಾ.ಪಂ. ಅಧ್ಯಕ್ಷೆ ರೇಣುಕಾಮ್ಮ, ಪಿಡಿಒ ವತಸಲ್ , ಉಪಾಧ್ಯಕ್ಷೆ ರಾಮಕೃಷ್ಣ ರಾಜು,ಗುರುರಾಜ್, ಶ್ರೀದೇವಿ‌ ಸೇರಿದಂತೆ ಇತರರು ಇದ್ದರು.