ಕಡ್ಡಾಯವಾಗಿ ಸಂಚಾರ ನಿಯಮ ಪಾಲಿಸಲು ಕರೆ


ನವಲಗುಂದ,ಜ.16: ಎಲ್ಲಾ ವಾಹನ ಚಾಲಕರು ಚಾಲನೆ ಮಾಡುವಾಗ ಮೊಬೈಲ್ ಬಳಕೆ ಮಾಡಬಾರದು. ಸೀಟ್ ಬೆಲ್ಟ್, ಹೆಲ್ಮೆಟ್ ಧರಿಸಬೇಕು, ಅತೀ ವೇಗವಾಗಿ ವಾಹನ ಚಾಲನೆ ಮಾಡಬಾರದು ಕಡ್ಡಾಯವಾಗಿ ಸಂಚಾರ ನಿಯಮಗಳನ್ನು ಪಾಲಿಸುವಂತೆ ಪಿಎಸ್‍ಐ ಜನಾರ್ಧನ ಭಟ್ರಳ್ಳಿ ಕರೆ ನೀಡಿದರು.
ಶಾಲಾ ಮಕ್ಕಳು ರಸ್ತೆಯಲ್ಲಿ ಸಂಚರಿಸುವಾಗ ರಸ್ತೆಯ ಎಡ ಭಾಗದಲ್ಲಿ ಸಂಚರಿಸಬೇಕು. ರಸ್ತೆಗಳನ್ನು ದಾಟುವಾಗ ಅತಿ ಜಾಗರೂಕತೆಯಿಂದ ರಸ್ತೆ ದಾಟಬೇಕು. ಶಾಲಾ ವಾಹನಗಳ ಚಾಲಕರನ್ನು ನೇಮಿಸುವ ಮುನ್ನ ಅವರುಗಳ ಪೂರ್ವಾಪರವನ್ನು ಪರಿಶೀಲಿಸಬೇಕಾಗುತ್ತದೆ ಎಂದರು.
ಇದಕ್ಕೂ ಮೊದಲು ಪೆÇಲೀಸ್ ಇಲಾಖೆಯಿಂದ ಹಮ್ಮಿಕೊಂಡ ರಸ್ತೆ ಸುರಕ್ಷಾ ಸಪ್ತಾಹ 2024 ರ ಸಪ್ತಾಹ ಜಾಥಾಕ್ಕೆ ಸಿಪಿಐ ರವಿಕುಮಾರ್ ಕಪ್ಪತ್ತನವರ ಚಾಲನೆ ನೀಡಿದರು.
ನಂತರ ನಗರದ ಪ್ರಮುಖ ಬೀದಿಗಳಲ್ಲಿ ರಸ್ತೆ ಸುರಕ್ಷತಾ ಜಾಥಾ ಜರುಗಿತು ಜಾಥಾದಲ್ಲಿ ಸಂಚಾರ ಸುರಕ್ಷತಾ ನಿಯಮಗಳ ಪಾಲನೆ ಬಗ್ಗೆ ಜಾಗೃತಿ ಘೋಷಣೆಗಳನ್ನು ಕೂಗಿದರು.
ಪೆÇಲೀಸ್ ಇಲಾಖೆಯ ಎಲ್ಲ ಸಿಬ್ಬಂದಿಗಳು ವಾಹನ ಸಮೇತ ಜಾಥಾದಲ್ಲಿ ಪಾಲ್ಗೊಂಡಿದ್ದರು