ಕಣ್ಣನ್‌ಗೆ ನೋಟಿಸ್ ವಾಪಸ್ಸಿಗೆ ಸೂಚನೆ

ಬೆಂಗಳೂರು, ಜ. ೨೪- ಹಿರೇಮಗಳೂರು ಕಣ್ಣನ್ ರವರಿಗೆ ತಸ್ತಿಕ್ ಹಣ ವಾಪಸ್ ನೀಡುವಂತೆ ನೋಟಿಸ್ ನೀಡಿರುವುದನ್ನು ವಾಪಸ್ ಪಡೆಯುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹಿರೇಮಗಳೂರು ಕಣ್ಣನ್ ಅವರಿಗೆ ತಸ್ತಿಕ್ ಹಣ ವಾಪಸ್ ನೀಡುವಂತೆ ನೋಟಿಸ್ ನೀಡಿರುವುದರಲ್ಲಿ ತಹಶೀಲ್ದಾರ್ ರವರ ತಪ್ಪಿದೇ ಹೊರತು ಕಣ್ಣನ್ ಅವರ ತಪ್ಪಿಲ್ಲ. ನೋಟಿಸ್ ಹಿಂಪಡೆಯುವಂತೆ ಸಂಬಂಧಪಟ್ಟವರಿಗೆ ಮಾತನಾಡುವುದಾಗಿ ಮುಖ್ಯಮಂತ್ರಿಗಳು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಹಿರೇಮಗಳೂರು ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿದ ತಹಶೀಲ್ದಾರ್ ಅವರಿಂದಲೇ ಬಾಕಿ ಹಣ ಕಟ್ಟಿಸಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಟ್ವೀಟ್‌ನಲ್ಲಿ ಸ್ಪಷ್ಟಪಡಿಸಿದ್ದಾರೆ.