ಕತ್ತಿಗೆ ಚಾಕುವಿನಿಂದ ಇರಿದು ಪರಾರಿಯಾದ ದುಷ್ಕರ್ಮಿಗಳು

ಕಲಬುರಗಿ,ಮೇ.13- ದುಷ್ಕರ್ಮಿಗಳು ಚಾಕುವಿನಿಂದ ಕತ್ತಿಗೆ ತಿವಿದು ಕೊಲೆಗೆ ಯತ್ನ ನಡೆಸಿರುವ ಘನೆ ಜಿಲ್ಲೆಯ ಆಳಂದ ತಾಲೂಕಿನ ಜವಳಗಾ (ಬಿ) ಗ್ರಾಮದಲ್ಲಿ ನಡೆದಿದೆ.
ಚಾಕುವಿನಿಂದ ಇರಿತಕ್ಕೆ ಒಳಗಾದ ಜವಳಗಾ (ಬಿ) ಗ್ರಾಮದ ಹಣಮಂತ ಸುಬಾಷ ಕೊರವಾರ ಎಂಬವರನ್ನು ಆಳಂದ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಯಾವ ಕಾರಣಕ್ಕಾಗಿ ದುಷ್ಕರ್ಮಿಗಳು ಚಾಕುವಿನಿಂದ ದಾಳಿ ಮಾಡಿದ್ದಾರೆ ಎಂಬ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.