ಕತ್ತಿಯಿಂದ ಕಡಿದು ಯುವತಿ ಬರ್ಬರ ಕೊಲೆ

ಕೊಡಗು,ಜ.೧೬-ಕತ್ತಿಯಿಂದ ಕಡಿದು ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ದಾರುಣ ಘಟನೆ ವಿರಾಜಪೇಟೆ ಸಮೀಪದ ನಂಗಾಲ ಗ್ರಾಮದಲ್ಲಿ ನಡೆದಿದೆ. ನಂಗಾಲದ ಆರತಿ(೨೪)ಕೊಲೆಯಾದವರು. ಕೊಲೆಯಾದ ಸ್ಥಳದಲ್ಲಿ ವ್ಯಕ್ತಿಯ ಹೆಲ್ಮೆಟ್ ಪತ್ತೆಯಾಗಿದ್ದು, ತಮ್ಮಯ್ಯ ಎಂಬಾತನಿಗೆ ಸೇರಿದ್ದಾಗಿದೆ. ಕೊಲೆಯಾದ ಅನತಿ ದೂರದಲ್ಲಿ ಆತನ ಬೈಕ್ ಕೂಡ ಪತ್ತೆಯಾಗಿದೆ. ಮೂರು ದಿನಗಳಿಂದ ಆರತಿಗೆ ತಮ್ಮಯ್ಯ ಆತ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದ್ದು ನಿನ್ನೆ ರಾತ್ರಿ ಆತನೇ ಕೊಲೆ ಮಾಡಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ತಮ್ಮಯ್ಯನ ಮೊಬೈಲ್ ಹಾಗೂ ಚಪ್ಪಲಿ ಸ್ಥಳದಲ್ಲಿ ಪತ್ತೆಯಾಗಿದೆ. ಕೊಲೆ ಬಳಿಕ ತಮ್ಮಯ್ಯ ಕೂಡ ವಿಷ ಸೇವಿಸಿರುವ ಬಗ್ಗೆ ಅನುಮಾನ ಹುಟ್ಟಿದೆ. ಇದಕ್ಕೆ ಪುಷ್ಠಿ ನೀಡುವಂತೆ ಮೊಬೈಲ್ ದೊರೆತಿರುವ ಸ್ಥಳದಲ್ಲಿ ವಿಷದ ಬಾಟ್ಲಿ ಕೂಡ ಸಿಕ್ಕಿದೆ. ಪ್ರಕರಣ ದಾಖಲಿಸಿರುವ ವಿರಾಜಪೇಟೆ ಪೊಲೀಸರು ಆರೋಪಿಯ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.