ಕತ್ತಿ ನಿಧನ; ಪ್ರಧಾನಿ ಸಂತಾಪ

ಬೆಂಗಳೂರು, ಸೆ. ೭- ಸಚಿವ ಉಮೇಶ್ ಕತ್ತಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಉಮೇಶ್ ಕತ್ತಿ ಅನುಭವಿ ನಾಯಕ, ಕರ್ನಾಟಕದ ಅಭಿವೃದ್ಧಿಗೆ ಬಹಳಷ್ಟು ಕೊಡುಗೆ ನೀಡಿದ್ದಾರೆ. ಅವರ ಅಗಲಿಕೆಯಿಂದ ನೋವಾಗಿದೆ. ಈ ದುಃಖದ ಸನ್ನಿವೇಶದಲ್ಲಿ ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ನೋವು ಸಹಿಸುವ ಶಕ್ತಿ ದೊರೆಯಲೆಂದು ಪ್ರಾರ್ಥನೆ. ಓಂ ಶಾಂತಿ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ರಾಜ್ಯಪಾಲರ ಸಂತಾಪ
ಆಹಾರ ಮತ್ತು ನಾಗರಿಕ ಇಲಾಖೆ ಸಚಿವರಾದ ಉಮೇಶ್ ಕತ್ತಿ ಅವರ ನಿಧನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಂತಾಪ ಸೂಚಿಸಿದ್ದಾರೆ.
“ಆಹಾರ ಮತ್ತು ನಾಗರಿಕ ಇಲಾಖೆ ಸಚಿವರಾದ ಉಮೇಶ್ ಕತ್ತಿ ಅವರು ನಿಧನ ದುಃಖ ತಂದಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬವರ್ಗ, ಸಹೋದ್ಯೋಗಿಗಳು ಮತ್ತು ಅಸಂಖ್ಯಾತ ಸಹವರ್ತಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.” ಎಂದು ಟ್ವೀಟ್ ಮಾಡುವ ಮೂಲಕ ಗೌರವಾನ್ವಿತ ರಾಜ್ಯಪಾಲರು ಸಂತಾಪ ಸೂಚಿಸಿದ್ದಾರೆ.