ಕನಕದಾಸರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸೋಣ:ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ

ಬೀದರ ನ.04: ನವೆಂಬರ್.11 ರಂದು ನಡೆಯಲಿರುವ ಭಕ್ತ ಕನಕದಾಸರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸೋಣ ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ ಹೇಳಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ಭಕ್ತ ಕನಕದಾಸರ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನವೆಂಬರ್.11 ರಂದು ಬೆಳಿಗ್ಗೆ 11 ಗಂಟೆಗೆ ಕನಕದಾಸರ ಭಾವಚಿತ್ರದ ಮೆರವಣಿಗೆ ಬೊಂಬಗೊಂಡೇಶ್ವರ ಸರ್ಕಲ್‍ದಿಂದ ಆರಂಭವಾಗಿ ಬಸವೇಶ್ವರ ವೃತ್ತ, ಭಗತಸಿಂಗ್ ವೃತ್ತ, ಅಂಬೇಡ್ಕರ್ ವೃತ್ತ ಮತ್ತು ಕರಿಯಪ್ಪ ಸರ್ಕಲ್ ಮಾರ್ಗವಾಗಿ ರಂಗಮಂದಿರಕ್ಕೆ ಬಂದು ಅಲ್ಲಿ ಮಧ್ಯಾಹ್ನ 2 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಸಲಾಗುವುದು. ಕನಕದಾಸರ ಕುರಿತು ಶಾಲಾ ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ ಮತ್ತು ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಬೇಕೆಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಂದು ಬೆಳಿಗ್ಗೆ 10 ಗಂಟೆಗೆ ಸರ್ಕಾರಿ ಮತ್ತು ಅರೆ ಸರ್ಕಾರಿ ಸಂಸ್ಥೆಗಳಲ್ಲಿ ಕನಕದಾಸರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ನಂತರ 11 ಗಂಟೆಗೆ ನಡೆಯುವ ಕನಕದಾಸರ ಮೆರವಣಿಗೆ ಮತ್ತು ಮಧ್ಯಾಹ್ನ 2 ಗಂಟೆಗೆ ರಂಗಮಂದಿರದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಬೇಕು. ಕನಕದಾಸರ ಕುರಿತು ವಿಶೇಷ ಉಪನ್ಯಾಸವನ್ನು ಚನ್ನಪ್ಪಾ ಕಟ್ಟಿ ಅವರು ನೀಡಲಿದ್ದಾರೆ ಎಂದು ಹೇಳಿದರು.
ಈ ಹಿಂದೆ ಕೋವಿಡ್ ಕಾರಣದಿಂದ ಕನಕದಾಸರ ಜಯಂತಿಯನ್ನು ಸರಳವಾಗಿ ಆಚರಣೆ ಮಾಡಿದ್ದೇವೆ ಈಗ ಅದು ಇಲ್ಲ ಹಾಗಾಗಿ ಎಲ್ಲರೂ ಸೇರಿ ಭಕ್ತ ಕನಕದಾಸರ ಜಯಂತಿಯನ್ನು ವಿಜೃಂಭಣೆಯಿಂದ ಆಚರಣೆ ಮಾಡೋಣ ಎಂದು ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ ಹೇಳಿದರು.
ಈ ಸಭೆಯಲ್ಲಿ ಬೀದರ ಸಹಾಯಕ ಆಯುಕ್ತರಾದ ಲವಿಶ್ ಓರ್ಡಿಯಾ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಶಿಂಧೆ, ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಚಂದ್ರಕಾಂತ ಶಹಬಾದ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ರಾಜೇಂದ್ರಕುಮಾರ ಗಂದಗೆ, ಕನ್ನಡಾಂಭೆ ಬಳಗದ ಅಧ್ಯಕ್ಷರಾದ ವೀರುಪಾಕ್ಷಿ ಗಾದಗಿ, ಕನಕದಾಸ ಸಮಾಜದ ಮುಖಂಡರಾದ ಪಂಡಿತ ಚಿದ್ರಿ, ಎಮ್.ಎಸ್.ಕಟ್ಗೆ, ಮಾಳಪ್ಪಾ ಅಡಸಾರೆ, ಅಮೃತರಾವ ಚಿಮ್ಮಕೋಡ್, ನಗರಸಭೆ ಸದಸ್ಯ ಹಣಮಂತ ಮಲ್ಕಾಪೂರ, ಸಂಜೀವಕುಮಾರ ಅತಿಯಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.