ಕನಕಪುರಕ್ಕೆ ನಾನೇ ಬರುವೆ: ಡಿಕೆಶಿ

ಬೆಂಗಳೂರು, ಮೇ ೨೩-ನಾನೇ ಕನಕಪುರಕ್ಕೆ ಬಂದು ನಿಮಗೆ ಕೃತಜ್ಞತೆ ಸಲ್ಲಿಸಿ, ಅಭಿನಂದನೆ ಸ್ವೀಕರಿಸುವೆ. ನೀವ್ಯಾರೂ ಬೆಂಗಳೂರಿಗೆ ಬರುವ ತೊಂದರೆ ತೆಗೆದುಕೊಳ್ಳುವುದು ಬೇಡ ಎಂದು ಕನಕಪುರ ಕ್ಷೇತ್ರದ ಅಭಿಮಾನಿಗಳು, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
ದೆಹಲಿ ಪ್ರವಾಸದ ನಂತರ ನಾನೇ ಖುದ್ದಾಗಿ ಕನಕಪುರಕ್ಕೆ ಬರುತ್ತೇನೆ ಎಂದು ಅವರು ತಿಳಿಸಿದ್ದಾರೆ
ಕ್ಷೇತ್ರದ ಜನರಿಗೆ ತೊಂದರೆ ಆಗುವುದು ಬೇಡ ಎಂಬ ಕಾಳಜಿಯಿಂದ ಮನವಿ ಮಾಡುತ್ತಿದ್ದೇನೆ. ಯಾರೂ ಅನ್ಯತಾ ಭಾವಿಸುವುದು ಬೇಡ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.