
ಸಂಜೆವಾಣಿ ವಾರ್ತೆ
ದಾವಣಗೆರೆ.ಸೆ.೨; ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆಯು 25ನೇ ವರ್ಷದ ಪಾದಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸಮಾಜ ಸೇವೆಯ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಸಾಧಕರನ್ನ ಗುರುತಿಸಿ ರಾಜ್ಯಮಟ್ಟದ ಕನಕಶ್ರೀ ಚೇತನ ಪತಂಜಲಿ ರತ್ನ ರಾಜ್ಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತಿದ್ದು, ರಾಜ್ಯ ಪ್ರಶಸ್ತಿಗೆ ದಾವಣಗೆರೆ ನಗರದ ಡಾ. ರವಿಕುಮಾರ್ ಎ. ಜೆ ಇವರನ್ನು ಅಯ್ಕೆ ಮಾಡಲಾಗಿದ್ದು ನಾಳೆ ಶಿವಮೊಗ್ಗದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಪತ್ರಿಕೆಗೆ ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆಯ ರಾಜ್ಯ ಕಾರ್ಯದರ್ಶಿ ಜೆ.ನಾಗರಾಜ್ ತಿಳಿಸಿದ್ದಾರೆ.