ಕನಕ ನೌಕರರ ಸಂಘದಿಂದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ-ನೀಲಪ್ಪ ಹೊಸಮನಿ

ಲಿಂಗಸುಗೂರು.ಡಿ.೦೩- ಲಿಂಗಸುಗೂರು ತಾಲ್ಲೂಕಿನಲ್ಲಿ ದಿನಾಂಕ ೧೦ರಂದು ನಡೆಯಲಿರುವ ರಾಯಚೂರು ಜಿಲ್ಲಾ ಕನಕ ನೌಕರರ ಸಂಘ ಹಾಗೂ ಲಿಂಗಸುಗೂರು ಕನಕ ನೌಕರರ ಸಂಘದ ಸಂಯುಕ್ತ ಆಶ್ರಯದಲ್ಲಿ ಕನಕದಾಸರ ೫೩೬ ನೇ ಜಯಂತಿ ಅಂಗವಾಗಿ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ ಸನ್ಮಾನ ಕಾರ್ಯಕ್ರಮ ಕನಕ ಭವನ ಬಲಭೀಮ ಹೊಟೆಲ್ ಹತ್ತಿರ ಗುಡದನಾಳ ರಸ್ತೆ ಬರುವ ಕನಕ ಭವನದಲ್ಲಿ ನಡೆಯಲಿದೆ ಎಂದು ಕನಕ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸಪ್ಪ ಹಾಗೂ ಲಿಂಗಸುಗೂರು ತಾಲೂಕಿನ ಕನಕ ನೌಕರರ ಸಂಘದ ಅಧ್ಯಕ್ಷ ನೀಲಪ್ಪ ಹೊಸಮನಿ ಇವರು ಇಂದು ಪಟ್ಟಣದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ದಿನಾಂಕ ೧೦ ರಂದು ಬೆಳಿಗ್ಗೆ ನಡೆಯುತ್ತಿರುವ ಕನಕದಾಸರ ಜಯಂತಿ ಆಚರಣೆ ಮಾಡಲಾಗುತ್ತದೆ ಮತ್ತು ಈ ಕಾರ್ಯಕ್ರಮದಲ್ಲಿ ಹಾಲುಮತ ಸಮಾಜದ ಕುಲ ಗುರುಗಳಾದ ಶ್ರೀ ಸಿದ್ದರಾಮನಂದಪುರಿ ಮಹಾಸ್ವಾಮಿಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ ಮತ್ತು ಸಿದ್ದಯ್ಯ ತಾತ ಗುರುವಿನ ಚಿದಾನಂದಯ್ಯ ಗುರುವಿನ ಇವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ ಎಲ್ಲಾಕಡೆ ಪ್ರತಿಭಾನ್ವಿತ ಪ್ರತಿಭಾ ಪುರಸ್ಕಾರ ಸಮಾರಂಭದ ಕಾರ್ಯಕ್ರಮದ ಅಂಗವಾಗಿ ಸಾಕಷ್ಟು ಪ್ರಚಾರ ಕಾರ್ಯ ಕೈಗೊಂಡಿದ್ದು ಜಿಲ್ಲೆಯ ಸಮಾಜದ ಎಸ್‌ಎಸ್‌ಎಲ್‌ಸಿ, ಪಿಯುಸಿ, ಬಿಎ ಪದವಿಯಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಮತ್ತು ಸಮಾಜದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಹಾಗೂ ಹಾಲುಮತ ಸಮಾಜದ ಚುನಾಯಿತ ಶಾಸಕರು ವಿಧಾನಪರಿಷತ್ ಸದಸ್ಯರು ಹಾಲಿ ಮಾಜಿ ಶಾಸಕರ ಸಮ್ಮುಖದಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮಾನಪ್ಪ ಬಳ್ಳಾಬಟ್ಟಿ ಹೇಳಿದರು ಈ ಸಂದರ್ಭದಲ್ಲಿ ಶಂಕರಗೌಡ ಮರಿಯಪ್ಪ ರಾಮಣ್ಣ ಸೇರಿದಂತೆ ಇತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.