ಕನಗೊಂಡನಹಳ್ಳಿ ಎಸ್ ಡಿ ಎಂ ಸಿ ಅಧ್ಯಕ್ಷ -, ಉಪಾಧ್ಯಕ್ಷರ  ಅವಿರೋಧ ಆಯ್ಕೆ

ದಾವಣಗೆರೆ.ಜು.೧೯: ತಾಲ್ಲೂಕಿನ ಕನಗೊಂಡನ ಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2022-23ನೇ ಸಾಲಿನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಕೆ.ಎನ್.ಮಂಜುನಾಥ್ ಹಾಗೂ ಉಪಾಧ್ಯಕ್ಷರಾಗಿ ಎಚ್.ಎಸ್.ರೇಣುಕಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಕನಗೊಂಡನಹಳ್ಳಿಯ ಶಾಲಾ ಆವರಣದಲ್ಲಿ ಜುಲೈ18ರಂದು ಸೋಮವಾರ ನಡೆದ ಚುನಾವಣೆಯಲ್ಲಿ ಇಬ್ಬರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಈ  ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು, ಮುಖಂಡರು,ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಸೇರಿದಂತೆ ಪೋಷಕರು ಪಾಲ್ಗೊಂಡಿದ್ದರು. ಶಿಕ್ಷಣ ಇಲಾಖೆಯ ನಿಯಮದಂತೆ ಶಾಲೆಯ ನೂತನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸಮಿತಿಗೆ  ಮೀಸಲಾತಿ ಆಧಾರದಲ್ಲಿ 18 ಜನ ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. 9ಜನ ಮಹಿಳೆಯರು ಹಾಗೂ 9ಜನ ಪುರುಷರು ಸೇರಿದಂತೆ ಒಟ್ಟು 18 ಜನ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಈ ರೀತಿ ಆಯ್ಕೆಯಾದ 18ಜನ ಸದಸ್ಯರು ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಿದರು ಎಂದು ಶಾಲೆಯ ಮುಖ್ಯೋಪಾಧ್ಯಾಯ ತಿಳಿಸಿದ್ದಾರೆ.