ಕನಿಷ್ಟ ಬೆಂಬಲ ಬೆಲೆ ಗ್ಯಾರಂಟಿ ನೀಡಲಿ

ಬೆಂಗಳೂರು, ನ.೧೯- ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂದಕ್ಕೆ ಪಡೆದಿರುವುದು ಸ್ವಾಗತಾರ್ಹ ಆದರೆ ಕನಿಷ್ಠ ಬೆಂಬಲ ಬೆಲೆ ಗ್ಯಾರಂಟಿ ಬಗ್ಗೆ ಯಾವುದೇ ಉಲ್ಲೇಖ ಮಾಡಿಲ್ಲ ಎಂದು ರೈತ ಮುಖಂಡ ಬಡಗಲಪುರ ನಾಗೇಂದ್ರ ಹೇಳಿದ್ದಾರೆ.
ಕನಿಷ್ಠ ಬೆಂಬಲ ಬೆಲೆ ಗ್ಯಾರೆಂಟಿ ನೀಡದೆ ಕೃಷಿ ಕಾಯ್ದೆ ಹಿಂದಕ್ಕೆ ಪಡೆಯುವುದರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ಅವರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ,ಅವರು ಕೃಷಿ ಕಾಯ್ದೆಯನ್ನು ಹಿಂದಕ್ಕೆ ಪಡೆಯುವುದಾಗಿ ಪ್ರಕಟಿಸಿದ ನಂತರ ಪ್ರತಿಕ್ರಿಯೆ ನೀಡಿರುವ ಅವರು ರೈತರು ಕಳೆದ ಒಂದು ವರ್ಷಕ್ಕೂ ಹೆಚ್ಚು ಸಮಯದಿಂದ ನಡೆಸುತ್ತಿರುವ ಹೋರಾಟಕ್ಕೆ ಸಿಕ್ಕ ಗೆಲುವು ಎಂದು ಅವರು ಹೇಳಿದ್ದಾರೆ.
ರೈತರ ಹೋರಾಟಕ್ಕೆ ಮಣಿದಿರುವ ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆದಿದೆ ಆದರೆ ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಯಾವುದೇ ಪ್ರಸ್ತಾಪ ಮಾಡಿಲ್ಲ ರೈತರನ್ನು ಕಣ್ಣೊರೆಸುವ ಕೆಲಸ ಇದು ಎಂದು ಅವರು ಹೇಳಿದ್ದಾರೆ