ಕನ್ನಡದಲ್ಲಿಯೂ ‘83’

ಬಹು ಭಾಷೆಯ ಸಿನಿಮಾ ‘83’  ಕನ್ನಡದಲ್ಲಿಯೂ ತೆರೆಗೆ ಬರಲಿದೆ. ಭಾರತ ಏಕ ದಿನದ ವಿಶ್ವ ಕಪ್ ಕ್ರಿಕೆಟ್ ತನ್ನ ಮಡಿಲಿಗೆ ಪಡೆದ ವರ್ಷ ಕುರಿತಾದ ಸಿನಿಮಾಕ್ರಿಸ್ಮಸ್  ಗೆ ಬಿಡುಗಡೆಯಾಗಲಿದೆ.

ಕನ್ನಡದಲ್ಲಿ ತೆರೆ ಕಾಣುತ್ತಿರುವ ‘83’ ಸಿನಿಮಾವನ್ನು  ಅರ್ಪಿಸಲು ಸಂತೋಷ ಆಗುತ್ತದೆ ಎಂದು ಕಿಚ್ಚ ಸುದೀಪ್ ಹೇಳಿದ್ದಾರಡ.  ಇದೊಂದು ನಂಬಲಾಗದ ಬಹುದೊಡ್ಡ ಕ್ರಿಕೆಟ್ ಚರಿತ್ರೆ ಪುಟಗಳಲ್ಲಿ ಸೇರಿರುವ 1983 ಭಾರತ ವೆಸ್ಟ್ ಇಂಡೀಸ್ ವಿರುದ್ದ ಗೆದ್ದ ಏಕದಿನದ ವಿಶ್ವ ಕಪ್ ವಿಷಯ ಕುರಿತಾದ ಚಿತ್ರ. ಕ್ರಿಕೆಟ್ ಎಂಬುದು ಭಾರತಿಯರಿಗೆ ಒಂದು ಧರ್ಮವೇ ಆಗಿ ಹೋಗಿರುವಾಗ ನೈಜ ಕಥೆಯನ್ನು ತೆರೆಯ ಮೇಲೆ ತಂದಿರುವುದಕ್ಕೆ ಅಭಿನಂದನೆಗಳು. ಇದು ನಿಜಕ್ಕೂ ಬಹು ನಿರೀಕ್ಷೆಯ ಚಿತ್ರ ಎಂದು ಕಿಚ್ಚ ಹೇಳಿದ್ದಾರೆ.

ಕಬೀರ್ ಖಾನ್ ನಿರ್ದೇಶನದ ಚಿತ್ರ ನಿರ್ದೇಶನ ಮಾಡಿದ್ದಾರೆ. ರಣವೀರ್ ಸಿಂಗ್ ‘83’ ಚಿತ್ರದಲ್ಲಿ ಕಪಿಲ್ ದೇವ್ ಪಾತ್ರ ನಿರ್ವಹಿಸಿದ್ದಾರೆ. ತಾಹೀರ್ ರಾಜ್ ಭಾಸಿನ್, ಜೀವ, ಸಾಕಿಬ್ ಸಲೀಂ, ಜತಿನ್ ಸಾರ್ಣ, ಚಿರಾಗ್ ಪಾಟಿಲ್, ದಿನಕರ್ ಶರ್ಮ, ನಿಶಾಂತ್ ದಾಹಿಯ, ಹಾರ್ಡಿ ಸಂಧು, ಸಾಹಿಲ್ ಖಟ್ಟರ್, ಅಮ್ಮಿ ವಿರ್ಕ್, ಅದಿನಾಥ್ ಕೊತಾರೆ, ಧೈರ್ಯ ಕರ್ವ, ಆರ್ ಬದ್ರಿ ಹಾಗೂ ಪಂಕಜ್ ತೃಪತಿ ತಾರಾಗಣದಲ್ಲಿ ಇದ್ದಾರೆ. ನಟಿ ದೀಪಿಕ ಪಡುಕೋಣೆ ಕಪಿಲ್ ದೇವ್ ಪಾತ್ರದಾರಿ ರಣವೀರ್ ಸಿಂಗ್ ಪತ್ನಿ ಕ್ರಿಕೆಟಿಗ ಕಪಿಲ್ ದೇವ್ ಪತ್ನಿ ರೋಮಿ ಪಾತ್ರದಲ್ಲಿ  ಅಭಿನಯಿಸಿದ್ದಾರೆ.