ಕನ್ನಡ ಅಂಕವೀರರಿಗೆ ಗುಣಾಗ್ರಣಿ ಪ್ರಶಸ್ತಿ ಪ್ರದಾನ 17 ರಂದು

ಕಲಬುರಗಿ:ಮೇ.14: ಹತ್ತನೇ ಪರೀಕ್ಷೆಯ ಕನ್ನಡ ವಿಷಯದಲ್ಲಿ ಅತೀ ಹೆಚ್ಚು ಅಂಕ ಪಡೆದ ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ಮಾತೃಭಾಷಾಭಿಮಾನದ ಕಿಚ್ಚನ್ನು ಹೆಚ್ಚಿಸುವ ಉದ್ದೇಶದಿಂದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಮೇ 17 ರಂದು ಬೆಳಗ್ಗೆ 11.15 ಕ್ಕೆ ನಗರದ ಕನ್ನಡ ಭವನದ ಪ್ರಾಂಗಣದಲ್ಲಿ ಹತ್ತರ ಕನ್ನಡಕೆ ಗುಣಾಗ್ರಣಿ ಎಂಬ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
ಕನ್ನಡ ಭಾಷೆ ಮತ್ತು ಸಂಸ್ಕøತಿ ಉಳಿಸಿ-ಬೆಳೆಸುವ ಗುರುತರ ಜವಾಬ್ದಾರಿ ಇಂದಿನ ಪ್ರತಿಯೊಬ್ಬ ವಿದ್ಯಾಥಿಯ ಮೇಲಿದೆ. ಹಾಗಾಗಿ ಕನ್ನಡ ಅಂಕವೀರರಿಗೆ ಪ್ರೋತ್ಸಾಹಿಸುವ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ಮೂಡಿಸುವ ಉದ್ದೇಶ ಈ ಕಾರ್ಯಕ್ರಮ ಹೊಂದಿದೆ. ಸನ್ಮಾನಕ್ಕಾಗಿ ಜಿಲ್ಲೆಯ ವಿದ್ಯಾರ್ಥಿಗಳು ಈಗಾಗಾಗಲೇ 100 ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಲಾಗಿದ್ದು, ನೋಂದಾಯಿಸಿಕೊಳ್ಳುವ ಕಾರ್ಯ ಈಗಾಗಲೇ ಪೂರ್ಣಗೊಂಡಿದೆ.
ಉತ್ತರ ಕನ್ನಡ ಜಿಲ್ಲೆಯ ಅತ್ತಿವೇರಿಯ ಬಸವ ಧಾಮದ ಪೂಜ್ಯ ಶ್ರೀ ಬಸವೇಶ್ವರಿ ಮಾತಾಜೀ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಸಮಾರಂಭವನ್ನು ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಅಭಿಯಂತರರಾದ ಡಾ. ಸುರೇಶ ಶರ್ಮಾ ಅವರು ಉದ್ಘಾಟಿಸಲಿದ್ದಾg. ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಕ್ರೆಪ್ಪಗೌಡ ಬಿರಾದಾರ ಮಕ್ಕಳಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದು, ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ. ಗುರೂಜಿ ಪದವಿ ಮಹಾವಿದ್ಯಾಲಯದ ಮುಖ್ಯಸ್ಥ ಕಲ್ಯಾಣಕುಮಾರ ಶೀಲವಂತ, ಎಕೆಆರ್ ದೇವಿ ಪದವಿಪೂರ್ವ ಕಾಲೇಜಿನ ಆಡಳಿತಾಧಿಕಾರಿ ವಿದ್ಯಾಸಾಗರ ದೇಶಮುಖ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಮದು ಜಿಲ್ಲಾ ಕಸಾಪ ದ ಗೌರವ ಕಾರ್ಯದರ್ಶಿ ಧರ್ಮಣ್ಣ ಎಚ್ ಧನ್ನಿ ಕಾರ್ಯಕ್ರಮದ ಸಂಚಾಲಕ ಸಿದ್ಧಲಿಂಗ ಜಿ ಬಾಳಿ ಅವರು ಜಂಟಿಯಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.