ಕನ್ನಡ ನಾಡು ನುಡಿಕುರಿತ ಕಾರ್ಯಗಳಿಗೆ ಉತ್ತೇಜನ :ಕೆ. ವೆಂಕಟೇಶ್

ಸಂಜೆವಾಣಿ ವಾರ್ತೆ
ಚಾಮರಾಜನಗರ, ಫೆ.11:- ಕನ್ನಡ ಭಾಷೆ, ಪರಂಪರೆ, ಸಂಸ್ಕøತಿ ಚಟುವಟಿಕೆಗಳಿಗೆ ನಿರಂತರಉತ್ತೇಜನ ನೀಡಲಾಗುತ್ತಿದೆ ಎಂದು ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ತಿಳಿಸಿದರು.
ಮಲೆ ಮಹದೇಶ್ವರ ಬೆಟ್ಟದ ಶ್ರೀ ಮಹದೇಶ್ವರ ಬಯಲು ರಂಗಮಂದಿರಲ್ಲಿಂದು ಜಿಲ್ಲಾಡಳಿತ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ಹಾಗೂ ಜಿಲ್ಲಾ ಶಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕನ್ನಡಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ `ಗಡಿನಾಡುಕನ್ನಡಉತ್ಸವ’ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ನಾಡು-ನುಡಿಗೆ ಸದಾ ಪ್ರೋತ್ಸಾಹ ನೀಡಲಾಗುತ್ತಿದೆ. ಗಡಿಯಲ್ಲಿ ಕನ್ನಡ ಬೆಳಸುವ ಕಾರ್ಯಗಳಿಗೆ ಗಡಿನಾಡು ಕನ್ನಡ ಉತ್ಸವದಂತಹ ಕಾರ್ಯಕ್ರಮಗಳು ಪೂರಕವಾಗಿವೆ. ನಮ್ಮಜಿಲ್ಲೆಯ ಮಲೆ ಮಹದೇಶ್ವರನ ಸನ್ನಿಧಿಯಲ್ಲಿ ಇಂತಹ ಕಾರ್ಯಕ್ರಮ ಆಯೋಜನೆಯಾಗಿರುವುದು ಸಂತೋಷತಂದಿದೆ ಎಂದರು.
ರಾಜ್ಯ ಸರ್ಕಾರಿ ನೌಕರರ ಸಂಘವು ಕನ್ನಡ ಉತ್ಸವದಂತಹ ಕಾರ್ಯಗಳಿಗೆ ನೆರವಾಗುತ್ತಿರುವುದು ಶ್ಲಾಘ ನೀಯವಾಗಿದೆ. ಜಿಲ್ಲೆಯ ಕಾಡಂಚಿನ ಪ್ರದೇಶದ ಇಂಡಿಗನತ್ತ ಶಾಲೆಯನ್ನು ದತ್ತು ಪಡೆದು ಹಲವು ಸಹಾಯಕ ಕೆಲಸಗಳನ್ನು ಮಾಡಿರುವುದು ಮಾದರಿಯಾಗಿದೆ. ಇಂತಹ ಸಮಾಜ ಮುಖಿ ಕೆಲಸಗಳಿಂದ ಒಳ್ಳೆಯದಾಗಲಿದೆ ಎಂದು ಸಚಿವರು ತಿಳಿಸಿದರು.
ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಮಾತನಾಡಿ ಚಾಮರಾಜನಗರ ಜಿಲ್ಲೆ ಕಲೆಗಳ ತವರೂರು. ಜನಪದ ಕಲಾವಿದರು ಪ್ರತಿ ಊರಿನಲ್ಲೂ ಇದ್ದಾರೆ. ಮಲೆ ಮಹದೇಶ್ವರ, ಮಂಟೇಸ್ವಾಮಿ, ಸಿದ್ದಾಪ್ಪಾಜಿಯವರ ಸ್ಮರಣೆ ಹಾಡುಗಳನ್ನು ಹಾಡುವ ಕಲಾವಿದರು ಇಲ್ಲಿದ್ದಾರೆ. ನೆಲ, ಜಲ, ಭಾಷೆ ವಿಚಾರಕ್ಕೆದಕ್ಕೆ ಯಾದಾಗ ಇಡೀರಾಜ್ಯದಲ್ಲೆ ನಮ್ಮಜಿಲ್ಲೆಯ ಕನ್ನಡಪರ ಸಂಘಟನೆಗಳು ಮೊದಲು ಧ್ವನಿ ಎತ್ತುವ ಮೂಲಕ ಅಭಿಮಾನ ಮೂಡಿಸುತ್ತಿದ್ದಾರೆ ಎಂದರು. ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಮಾತನಾಡಿ ಚಾಮರಾಜನಗರ ಜಿಲ್ಲೆಯಲ್ಲಿ ಕನ್ನಡ ನಾಡು ನುಡಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮಾಡಿಕೊಂಡು ಬರುತ್ತಿದ್ದೇವೆ. ಕರ್ನಾಟಕ ಸುವರ್ಣ ಸಂಭ್ರಮ, ಕನ್ನಡ ರಾಜ್ಯೋತ್ಸವದಂತಹ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗಿದೆ. ಗಡಿಭಾಗವಾದ ನಮ್ಮ ಜಿಲ್ಲೆಯಲ್ಲೂ ಗಡಿನಾಡು ಕನ್ನಡ ಉತ್ಸವ ಏರ್ಪಡಿಸಲು ಅವಕಾಶ ಕಲ್ಪಿಸಿರುವುದು ಹೆಮ್ಮೆಯ ವಿಚಾರವಾಗಿದೆ ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಅವರು ಅವರು ಪ್ರಾಸ್ತಾವಿಕವಾಗಿ ಮಾತನಾಡಿನಮ್ಮ ಸಂಘಟನೆ ಸಮಾಜ ಮುಖಿಯಾಗಿ ಕೆಲಸ ಮಾಡುತ್ತಿದೆ. ಕನ್ನಡನಾಡು, ನುಡಿ, ಗಡಿ ವಿಚಾರದಲ್ಲಿಯೂ ಜಾಗೃತಿಗೊಳಿಸುವ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಂಡಿದೆ. ಗಡಿನಾಡು ಕನ್ನಡ ಉತ್ಸವದಂತಹ ಕಾರ್ಯಕ್ರಮಗಳನ್ನು ಏರ್ಪಡಿಸುತ್ತಾ ಬಂದಿದ್ದೇವೆ. ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಇಂಡಿಗನತ್ತ ಶಾಲಾಭಿವೃದ್ಧಿಗೆ ಕೊಡುಗೆ ನೀಡಿದ್ದೇವೆ. ರಾಜ್ಯ ಸರ್ಕಾರಿ ನೌಕರರು ಸ್ಪಂದನಾ ಶೀಲರಾಗಿದ್ದಾರೆ ಎಂದರು. ಸಾಲೂರು ಶ್ರೀಗಳಾದ ಶಾಂತಮಲ್ಲಿ ಕಾರ್ಜುನ ಸ್ವಾಮಿಜೀಯವರು ಕಾರ್ಯಕ್ರಮದ ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಅವರು ಸ್ವಾಗತಿಸಿದರು. ಇದೇ ವೇಳೆ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಾದ ಜಿಲ್ಲೆಯವರಾದ ಗೋಪಾಲ್ ಜಗದೀಶ್ ಅವರನ್ನು ಸನ್ಮಾನಿಸಲಾಯಿತು.
ಮಲೆ ಮಹದೇಶ್ವರ ಬೆಟ್ಟದಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ. ಅರ್ಚನಾ ಪ್ರಕಾಶ್, ಕನ್ನಡಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಕಾಶ್ ಮತ್ತೀಹಳ್ಳಿ, ತಹಶೀಲ್ದಾರ್ ಮಂಜುಳ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಹಾಗೂ ತಾಲೂಕು ಘಟಕಗಳ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೂ ಮೊದಲು ಜಾನಪದ ಕಲಾತಂಡಗಳ ಮೆರವಣಿಗೆ ಹಾಗೂ ಸಾಂಸ್ಕøತಿಕ ನಡಿಗೆ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆಯೇ ಕನ್ನಡ ಜಾಗೃತಿ ಜಾಥಾಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್, ಜಿಲ್ಲಾಧಿಕಾರಿ ಶಿಲ್ಪಾ ನಾಗ್‍ಅವರು ಚಾಲನೆ ನೀಡಿದರು.
ಬಳಿಕ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಅರಣ್ಯದಂಚಿನ ಇಂಡಿಗನತ್ತ ಸರ್ಕಾರಿ ಪ್ರಾಥಮಿಕ ಶಾಲೆಗೆ ತೆರಳಿ ಶಾಲೆಯಲ್ಲಿ ಸ್ಮಾರ್ಟ್‍ಕ್ಲಾಸ್‍ಗೆ ಅಗತ್ಯವಿರುವ ಸಲಕರಣೆಗಳನ್ನು ನೀಡಿದರು. ಶಾಲೆಯ ಪೋಷಣೆಗೆ ಎಲ್ಲಾ ನೆರವು ಕಲ್ಪಿಸುವ ಪ್ರಕ್ರಿಯೆಗೆ ಚಾಲನೆ ನೀಡಿದರು. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ, ಜಿಲ್ಲಾಅಧ್ಯಕ್ಷರಾದ ಚಂದ್ರಶೇಖರ್ ಸೇರಿದಂತೆ ರಾಜ್ಯ ಹಾಗೂ ಜಿಲ್ಲಾ ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು. ಹಲವಾರು ವರ್ಷಗಳಿಂದ ಇಂಡಿಗನತ್ತ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರಾದ ರಾಘವೇಂದ್ರಅವರನ್ನು ಸನ್ಮಾನಿಸಲಾಯಿತು. ಗಡಿನಾಡು ಕನ್ನಡ ಉತ್ಸವ ಅಂಗವಾಗಿ ಮಲೆ ಮಹದೇಶ್ವÀರ ಬೆಟ್ಟದ ಬಯಲು ರಂಗಮಂದಿರದಲ್ಲಿ ಸಂಜೆಯ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆದವು.