ಕನ್ನಡ ಭವನಕ್ಕೆ 1 ಕೋಟಿ ರೂ. ಬಿಡುಗಡೆ, ಪ್ರಾಧಿಕಾರದ ಅಧ್ಯಕ್ಷರಿಗೆ ಒಕ್ಕೂಟದಿಂದ ಅಭಿನಂದನೆ

ಬೀದರ, ಮಾ. 27ಃ ಬಹು ವರ್ಷಗಳಿಂದ ಕನ್ನಡ ಭವನಕ್ಕೆ ಬಿಡುಗಡೆಯಾಗಬೇಕಿದ್ದ 1 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿರುವ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ ಅವರಿಗೆ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷರಾದ ವಿಜಯಕುಮಾರ ಸೋನಾರೆ ಧನ್ಯವಾದಗಳು ಸಲ್ಲಿಸಿದ್ದಾರೆ.

ಬೆಂಗಳೂರಿನಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ ಅವರು ಒಕ್ಕೂಟದಿಂದ ಸನ್ಮಾನ ಸ್ವೀಕರಿಸಿ ಮಾತನಾಡುತ್ತ, ಗಡಿಯಲ್ಲಿರುವ ಬೀದರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನಕ್ಕೆ ರಾಜ್ಯ ಸರ್ಕಾರ 2 ಕೋಟಿ ರೂ. ಮಂಜೂರು ಮಾಡಿತ್ತು. ಮೊದಲ ಕಂತು 1 ಕೋಟಿ ರೂ. ಬಿಡುಗಡೆ ಮಾಡಿತ್ತು. ಅನುದಾನದ ಅಲಭ್ಯತೆಯಿಂದ ಇನ್ನುಳಿದ 1 ಕೋಟಿ ರೂ.ಗಳು ಬಿಡುಗಡೆ ಮಾಡಲು 1-2 ವರ್ಷಗಳು ಬೇಕಾಯಿತು ಎಂದು ಹೇಳಿದರು.

ಕನ್ನಡ ಭವನಕ್ಕೆ ಉಳಿದ 1 ಕೋಟಿ ರೂ.ಗಳು ಬಿಡುಗಡೆ ಮಾಡುವಂತೆ ಕೇಂದ್ರ ಸಚಿವ ಭಗವಂತ ಖೂಬಾ, ಜಿ.ಎನ್. ಫೌಂಡೇಷನ್ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ, ಬೀದರ ಜಿಲ್ಲಾಧಿಕಾರಿಗಳು, ಕಸಾಪ ಅಧ್ಯಕ್ಷ ಸುರೇಶ ಚೆನ್ನಶೆಟ್ಟಿ, ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ ಅವರು ಹಲವು ಸಲ ಪ್ರಾಧಿಕಾರಕ್ಕೆ ಮನವಿ ಮಾಡಿಕೊಂಡಿದ್ದರು ಎಂದು ಹೇಳಿದರು.

ಕನ್ನಡ ಭವನಕ್ಕೆ ಉಳಿದ 1 ಕೋಟಿ ರೂ.ಗಳು ಬಿಡುಗಡೆ ಮಾಡಿದ ಮುಖ್ಯಮಂತ್ರಿಗಳು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಿಗೆ ಕೃತಜ್ಞತೆಗಳು ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಗಡಿ ಜಿಲ್ಲೆ ಬೀದರನಲ್ಲಿ ಕನ್ನಡ ಭವನ ನಿರ್ಮಾಣಗೊಂಡು ಕನ್ನಡ ಚಟುವಟಿಕೆಗಳು ನಿರಂತರ ನಡೆಯುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ಯುವ ಸಂಘ ಸಂಸ್ಥೆಗಳ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಪಣಿಂದ್ರ ಪ್ರಸಾದ್, ಬೀದರ್ ಜಿಲ್ಲಾಧ್ಯಕ್ಷರಾದ ಸುನೀಲ ಭಾವಿಕಟ್ಟಿ, ಮಾರುತಿ ಮಾಸ್ಟರ್, ಕಾಶಿನಾಥ ಘಾಣಿಗೇರ್ ಇತರರು ಇದ್ದರು.