ಕನ್ನಡ ಭಾಷಾ ಶಿಕ್ಷಕರಿಗೆರಾಜ್ಯೋತ್ಸವ ಪ್ರತಿಭಾ ಪುರಸ್ಕಾರ

ಬಳ್ಳಾರಿ ನ.7, ಕನ್ನಡ ಭಾಷಾ ಶಿಕ್ಷಕರ ವೇದಿಕೆ ಬಳ್ಳಾರಿ ಪೂರ್ವವಲಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಬಳ್ಳಾರಿ ಇವರ ಸಹಯೋಗದಲ್ಲಿ ನಿನ್ನೆ ನಗರದ ಕನ್ನಡ ಭವನದಲ್ಲಿ ಕನ್ನಡ ಶಿಕ್ಷಕರ ಕಾರ್ಯಾಗಾರ ಹಾಗೂ ಕನ್ನಡ ರಾಜ್ಯೋತ್ಸವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಬಳ್ಳಾರಿ ಪೂರ್ವವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಲಿಂಗ ಮೂರ್ತಿಯವರು ಕಾರ್ಯಕ್ರಮ ಉದ್ಘಾಟಿಸಿ ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡಿದ ಸಾಕಷ್ಟು ವಿದ್ಯಾರ್ಥಿಗಳು ಉನ್ನತ ಸ್ಥಾನದಲ್ಲಿದ್ದು ಉತ್ತಮ ನಾಗರಿಕರಾಗಿದ್ದಾರೆ. ವಿದ್ಯಾರ್ಥಿಗಳನ್ನು, ಶಿಕ್ಷಕರನ್ನು ಸನ್ಮಾನಿಸುವ ಮಹತ್ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಮುಖ್ಯ ಅತಿಥಿಗಳಾಗಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷಸಿದ್ದರಾಮ ಕಲ್ಮಠ ಅವರು ಮಾತನಾಡಿ ಕನ್ನಡ ನಾಡು ನುಡಿ ಕಟ್ಟುವಲ್ಲಿ ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು ಎಂದು ಹೇಳುತ್ತ ಕನ್ನಡ ಶಿಕ್ಷಕರು ಕೈಗೊಳ್ಳುವ ಉತ್ತಮ ಕಾರ್ಯಗಳಿಗೆ ಸಾಹಿತ್ಯ ¥ರಿಷತ್ತಿನ ಬೆಂಬಲ ಸದಾ ಇರುತ್ತದೆ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಹರಿಪ್ರಸಾದ್, ವೇದಿಕೆಯು ಕನ್ನಡ ನಾಡು ನುಡಿ ಕಟ್ಟಲು ಹಾಗೂ ವಿದ್ಯಾರ್ಥಿಗಳಲ್ಲಿ ಕನ್ನಡ ಅಭಿಮಾನ ಬೆಳೆಸಲು ಪೆÇ್ರೀತ್ಸಾಹಿಸುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಎ.ಮಲ್ಲಪ್ಪ, ಕನ್ನಡ ವೇದಿಕೆ ಅಧ್ಯಕ್ಷ ಮಲ್ಲಿಕಾರ್ಜುನ ಶ್ರೀಧರಗಡ್ಡೆ ಪರಿವೀಕ್ಷಕ ಸತ್ಯನಾರಾಯಣ, ಕರ್ನಾಟಕ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಶಿವಾಜಿರಾವ್, ಉಪಾಧ್ಯಕ್ಷ ಮಂಜುನಾಥ, ಬಳ್ಳಾರಿ ಜಿಲ್ಲಾ ಸಹಶಿಕ್ಷಕರ ಸಂಘದ ಕಾರ್ಯದರ್ಶಿ ಕೆ.ವಿ. ವಿಜಯಕುಮಾರ್ ಹಾಗೂ ಬಳ್ಳಾರಿ ಪೂರ್ವ ವಲಯದ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶಿವನನಾಯಕ್, ಸಹ ಶಿಕ್ಷಕರ ಸಂಘದ ಅಧ್ಯಕ್ಷ ಶಿವಣ್ಣ ಎಂ.ಬಿ. ಬಡ್ತಿ .ಸ.ಶಿ.ಸಂಘದ ಅಧ್ಯಕ್ಷ ಕುಮಾರಸ್ವಾಮಿ ಮುಂತಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ 125 ಕ್ಕೆ 125 ಅಂಕಗಳಿಸಿದ ತಾಲೂಕಿನ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಹಾಗೂ ತಾಲೂಕಿಗೆ ಅತಿ ಹೆಚ್ಚು ಅಂಕ ಪಡೆದ ಮೊದಲ ಮೂರು ವಿದ್ಯಾರ್ಥಿಗಳಿಗೆ ಹಾಗೂ ಕನ್ನಡ ವಿಷಯದಲ್ಲಿ ಪ್ರತಿಶತ 100 ಫಲಿತಾಂಶ ಸಾಧಿಸಿದ ಶಿಕ್ಷಕರಿಗೆ ಸನ್ಮಾನಿಸಲಾಯಿತು.
ನಾಗರಾಜ ಪಿ. ಬಸವರಾಜ. ಟಿ.ಎಂ, ಎಚ್.ಎಂ.ಕೊಟ್ರದೇವರು, ಓಬಳೇಶ ಪಿ, ಮಂಜುಳ ಯಗಟಿ ಮಠ ಹಾಗೂ ತಾಲೂಕಿನ ಕನ್ನಡ ಭಾಷಾ ಶಿಕ್ಷಕರು ಭಾಗವಹಿಸಿದ್ದರು.