ಕನ್ನಡ ಭಾಷೆಯ ರಕ್ಷಣೆ ನಮ್ಮೆಲ್ಲರ ಹೊಣೆ

ಜಗಳೂರು.ನ.೨: ನೆಲ, ಜಲ, ಸಂಪನ್ಮೂಲಗಳ ರಕ್ಷಣೆಯ ಜೊತೆಗೆ ಮಾತೃಭಾಷೆಯಾಗಿರುವ ಕನ್ನಡ ಭಾಷೆಯನ್ನು ರಕ್ಷಣೆ ಮಾಡುವ ಹೊಣೆ ನಮ್ಮೆಲ್ಲರದ್ದಾಗಿದೆ ಎಂದು ಶಾಸಕ ಎಸ್.ವಿ.ರಾಮಚಂದ್ರ ಪ್ರತಿಪಾದಿಸಿದರು.ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪ.ಪಂ ಸಹಭಾಗಿತ್ವದಲ್ಲಿ  ಪಟ್ಟಣದ ಬಯಲು ರಂಗಮಂದಿರದಲ್ಲಿ 67 ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಚದುರಿ ಹೋಗಿದ್ದ ಮೈಸೂರು ಸಂಸ್ಥಾನವನ್ನು ಅಖಂಡ ಏಕೀಕರಣ ಕರ್ನಾಟಕವನ್ನಾಗಿ ಮಾಡಿದ ಕೀರ್ತಿ ಆಲೂರು ವೆಂಕಟರಾಯರಿಗೆ ಸಲ್ಲುತ್ತದೆ. 1973 ರಲ್ಲಿ ವಿಶಾಲ ಕರ್ನಾಟಕವಾಗಿ ರೂಪುಗೊಂಡ ಮೇಲೆ ಕನ್ನಡ ಭಾಷೆಗೆ ರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ಸ್ಥಾನ ಮಾನ ಸಿಕ್ಕಿತು. ಬಿಜೆಪಿ ಸರಕಾರದ ಬಂದ ಮೇಲೆ ಆಡಳಿತದಲ್ಲಿ ಕನ್ನಡವನ್ನು ಪರಿಣಾಮಕಾರಿಯಾಗಿ ಜಾರಿ ಮಾಡಲಾಯಿತು.