ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಹೆಚ್ಚು ಪ್ರತಿಭಾವಂತರು

ಮಂಗಳೂರು, ನ.೪-ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕನ್ನಡ ರಾಜ್ಯೋತ್ಸವ ಕವಿಗೋಷ್ಠಿಯು ನಗರದ ಶಾರದಾ ವಿದ್ಯಾಲಯದಲ್ಲಿ ಜರಗಿತು. ಸರಕಾರಿ ಪ್ರಥಮ ದರ್ಜೆ ಕಾಲೇಜು ರಥಬೀದಿ ಇಲ್ಲಿನ ಸಹಾಯಕ ಪ್ರಾಧ್ಯಾಪಕಿ ಡಾ. ಜಯಶ್ರೀ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ಹೆಚ್ಚು ಪ್ರತಿಭಾನ್ವಿತರಾಗಿ ಬೆಳಕಿಗೆ ಬರುತ್ತಿದ್ದಾರೆ ಆದುದರಿಂದ ಮಾತೃ ಭಾಷಾ ಶಿಕ್ಷಣಕ್ಕೆ ಒತ್ತುನೀಡುವುದು ಅತೀ ಅಗತ್ಯವಾಗಿದೆ. ಕನ್ನಡ ಭಾಷಾ ಕಲಿಕೆಯಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿಯನ್ನು ವಹಿಸಿ ಕನ್ನಡ ಭಾಷಾ ಬೆಳವಣಿಗೆಯಲ್ಲಿ ತೊಡಗಿಕೊಳ್ಳಬೇಕೆಂದು ಕರೆನೀಡಿದರು.
ಕವಿಗೋಷ್ಠಿಯಲ್ಲಿ ಕವಿಗಳಾದ ಎಂ. ಕೃಷ್ಣ ಬರ್ವೆ, ಉಷಾ ಮಂದಾರ ಕಾಳೆ, ಸತ್ಯನಾರಾಯಣ ಹಾಗೂ ಲಕ್ಷ್ಮೀ ಬಡಗಯೆಕ್ಕಾರು ಸ್ವರಚಿತ ಕವನಗಳನ್ನು ವಾಚಿಸಿದರು. ಇದೇ ಸಂದರ್ಭ ಸಾಧಕ ಬಾಲಪ್ರತಿಭೆಗಳಿಗೆ ರಾಜ್ಯೋತ್ಸವ ಪುರಸ್ಕಾರ ನೀಡಿ ಗೌರವಿಸಲಾಯ್ತು. ನಿಟ್ಟೆ ವಿಶ್ವವಿದ್ಯಾನಿಲಯದ ಎ. ಬಿ. ಶೆಟ್ಟಿ ಡೆಂಟಲ್ ಕಾಲೇಜಿನ, ಸ್ಟೂಡೆಂಟ್ಸ್ ವೆಲ್ಫೇರ್ ಎಸೋಸಿಯೇಟ್ ಡೀನ್ ಡಾ| ಅಮರಶ್ರೀ ಅಮರನಾಥ ಶೆಟ್ಟಿ, ಶಾರದಾ ವಿದ್ಯಾಲಯದ ಅಧ್ಯಕ್ಷರಾದ ಪ್ರೋ| ಎಂ. ಬಿ. ಪುರಾಣಿಕ್, ಗಡಿನಾಡ ಸಾಹಿತ್ಯ ಸಂಸ್ಕೃತಿ ಅಕಾಡೆಮಿ, ಕಾಸರಗೋಡು ಇದರ ಅಧ್ಯಕ್ಷ ಪ್ರಭಾಕರ ಕಲ್ಲೂರಾಯ ಬದನಗದ್ದೆ ಮತ್ತು ಕನ್ನಡ ಸಾಹಿತ್ಯ ಪರಿಷತ್, ಮಂಗಳೂರು ತಾಲೂಕು
ಘಟಕಾಧ್ಯಕ್ಷೆ ವಿಜಯಲಕ್ಷ್ಮೀ ಬಿ. ಶೆಟ್ಟಿ ಉಪಸ್ಥಿತರಿದ್ದರು.