ಕನ್ನಡ ಮಾಧ್ಯಮ ಶಾಲೆಗಳ ಉಳಿಸಿ ಬೆಳೆಸುವ ಅಗತ್ಯವಿದೆ- ಬಿ.ಎ. ಬಸವರಾಜ್


ದಾವಣಗೆರೆ ನ. 01; ಮಾತೃ ಭಾಷೆ ಕನ್ನಡಕ್ಕೆ ನಮ್ಮ ಶಿಕ್ಷಣ ನೀತಿಯಲ್ಲಿ ಹೆಚ್ಚಿನ ಒತ್ತು ನೀಡಲಾಗಿದ್ದು, ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸುವ ಅಗತ್ಯವಿದೆ, ಕನ್ನಡ ಭಾಷೆಯ ಸೊಗಡನ್ನು ಉಳಿಸಿಕೊಂಡು, ಸೊಬಗನ್ನು ಹೆಚ್ಚಿಸುವ ಕೆಲಸ ಇನ್ನಷ್ಟು ಆಗಬೇಕಿದೆ ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ ಅವರು ಹೇಳಿದರು.ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ 66 ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟç ಧ್ವಜಾರೋಹಣ ನೆರವೇರಿಸಿ, ಅವರು ಸಂದೇಶ ನೀಡಿದರು.
 ಪ್ರಸ್ತುತ ಜಾಗತೀಕರಣದ ಹಿನ್ನೆಲೆಯಲ್ಲಿ ಇಂಗ್ಲೀಷ್ ಜ್ಞಾನ ಅವಶ್ಯಕವಾಗಿದ್ದರೂ, ಎಂದಿಗೂ ಮಾತೃ ಭಾಷೆ ಕನ್ನಡಕ್ಕೆ ನಮ್ಮದು ಮೊದಲ ಆದ್ಯತೆ. ನಮ್ಮ ಶಿಕ್ಷಣ ನೀತಿಯೂ ಮಾತೃ ಭಾಷೆಗೆ ಹೆಚ್ಚಿನ ಒತ್ತನ್ನು ನೀಡಿದೆ. ಕನ್ನಡ ಭಾಷೆಯನ್ನು ಉಳಿಸಿಕೊಳ್ಳುವಲ್ಲಿ ನಮ್ಮೆಲ್ಲರ ಜವಾಬ್ದಾರಿಯೂ ಇದೆ. ಕರ್ನಾಟಕವೆಂದರೆ ಕೇವಲ ಗಡಿರೇಖೆಯ ಒಳಗೆ ಸೀಮಿತವಾದ ಒಂದು ಭೌಗೋಳಿಕ ಪ್ರದೇಶವಲ್ಲ, ಅದು ಒಟ್ಟಾರೆ ರಾಷ್ಟಿçÃಯ ಸಂಸ್ಕೃತಿಯನ್ನು ಕನ್ನಡದ ಸ್ವಂತ ವ್ಯಕ್ತಿತ್ವದ ಹಿನ್ನೆಲೆಯಲ್ಲಿ ಪ್ರತಿಪಾದಿಸುವ ಅತ್ಯುನ್ನತ ಭಾವವಾಗಿದೆ. ಕನ್ನಡ ನಾಡು ನುಡಿ, ಸಂಸ್ಕೃತಿ, ಪರಂಪರೆ ಇಲ್ಲಿನ ಆಚರಣೆ ಎಲ್ಲವೂ ವಿಶ್ವಮಾನ್ಯ ಗೌರವಗಳಿಗೆ ಪಾತ್ರವಾಗಿದೆ. ಕನ್ನಡ ರಾಜ್ಯೋತ್ಸವದದಂದು ಕರ್ನಾಟಕ ಏಕೀಕರಣದ ಚರಿತ್ರೆಯನ್ನು ಎಲ್ಲರೂ ತಿಳಿದುಕೊಳ್ಳಲು ಮುಂದಾಗಬೇಕು. ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದಿರುವ, ಭಾರತೀಯ ಭಾಷೆ ಮತ್ತು ಸಾಹಿತ್ಯಗಳಲ್ಲಿ ಉನ್ನತ ಶ್ರೇಣಿಯಲ್ಲಿ ಇರುವ ಚೆಲುವ ಕನ್ನಡ ಭಾಷೆಗೆ ಎರಡು ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ ಎಂದರು.
ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ವಿದ್ಯಾರ್ಥಿಗಳ ತಂಡಗಳು ಪಥಸಂಚಲನದಲ್ಲಿ ಭಾಗವಹಿಸಿರಲಿಲ್ಲ, ಹೀಗಾಗಿ ಸರ್ಕಾರದ ವತಿಯಿಂದ ಒಟ್ಟು 6 ತಂಡಗಳು ಶಿಸ್ತಿನ ಮತ್ತು ಆಕರ್ಷಕ ಪಥ ಸಂಚಲನದಲ್ಲಿ ಪಾಲ್ಗೊಂಡವು. ಪೊಲೀಸ್ ಉಪಾಧೀಕ್ಷಕ ಪ್ರಕಾಶ್ ಪಿ.ಬಿ. ಅವರು ಪಥಸಂಚಲನದ ನೇತೃತ್ವ ವಹಿಸಿದ್ದರು. ಪಥಸಂಚಲನದಲ್ಲಿ ಜಿಲ್ಲಾ ಸಶಸ್ತç ಮೀಸಲು ಪಡೆಯ ಪಿಎಸ್‌ಐ ಸಂಗಮೇಶ್ ನೇತೃತ್ವದ ತಂಡ, ನಗರ ಉಪವಿಭಾಗದ ಅರವಿಂದ್ ನೇತೃತ್ವದ ತಂಡ, ಸುನೀಲ್ ತೇಲಿ ನೇತೃತ್ವದ ಗ್ರಾಮಾಂತರ ನಾಗರಿಕ ಪೊಲೀಸ್ ತಂಡ, ಅಮರೇಶ್ ನೇತೃತ್ವದಲ್ಲಿ ಗೃಹರಕ್ಷಕ ದಳ, ಸುಹಾಸ್ ಮುಂದಾಳತ್ವದಲ್ಲಿ ಅಗ್ನಿಶಾಮಕ ದಳ, ಆಂಜನಪ್ಪ ನೇತೃತ್ವದಲ್ಲಿ ಅರಣ್ಯ ರಕ್ಷಕದಳ ಆಕರ್ಷಕ ಪಥಸಂಚಲನ ನಡೆಸಿದರು. ಡಿಎಆರ್‌ನ ಬ್ಯಾಂಡ್ ಮಾಸ್ಟರ್ ಹೊನ್ನೂರಪ್ಪ ವಾದ್ಯ ತಂಡದಿAದ ರಾಷ್ಟçಗೀತೆ ಸಹಿತ, ಶುಶ್ರಾವ್ಯ ವಾದ್ಯ ಪ್ರಸ್ತುತಪಡಿಸಿದರು. ಪಥ ಸಂಚವಲನಕ್ಕೂ ಮುನ್ನ ತೆರೆದ ಜೀಪ್‌ನಲ್ಲಿ ತೆರಳಿದ ಜಿಲ್ಲಾ ಉಸ್ತುವಾರಿ ಸಚಿವರು, ಗೌರವ ವಂದನೆ ಸ್ವೀಕರಿಸಿದರು.
ಸಮಾರಂಭದಲ್ಲಿ ಸಂಸದ ಡಾ. ಜಿ.ಎಂ. ಸಿದ್ದೇಶ್ವರ, ದಾವಣಗೆರೆ ಉತ್ತರ ಕ್ಷೇತ್ರ ಶಾಸಕ ಎಸ್.ಎ. ರವೀಂದ್ರನಾಥ್, ದಾವಣಗೆರೆ ಮಹಾನಗರಪಾಲಿಕೆ ಮೇಯರ್ ಎಸ್.ಟಿ. ವೀರೇಶ್, ಧೂಡಾ ಅಧ್ಯಕ್ಷ ದೇವರಮನಿ ಶಿವಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಪಂ ಸಿಇಒ ಡಾ. ವಿಜಯ ಮಹಾಂತೇಶ್, ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಪೊಲೀಸ್ ಇಲಾಖೆಯ ಐಜಿಪಿ ರವಿ, ಎಸ್‌ಪಿ ಸಿ.ಬಿ. ರಿಷ್ಯಂತ್, ಎಎಸ್‌ಪಿ ಎಂ. ರಾಜೀವ್, ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಸೇರಿದಂತೆ ವಿವಿಧ ಗಣ್ಯರು, ಅಧಿಕಾರಿಗಳು, ಹಲವು ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಕನ್ನಡಪ್ರೇಮಿಗಳು ಭಾಗವಹಿಸಿದ್ದರು. ಕೋವಿಡ್ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಲಾಗಿತ್ತು.