ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಗಾಣಿಗೇರಗೆ

ಧಾರವಾಡ ನ.21-ನಗರದ ಮರಾಠಾ ವಿದ್ಯಾ ಪ್ರಸಾರಕ ಮಂಡಳದ ಶ್ರೀ ಛತ್ರಪತಿ ಶಿವಾಜಿ ಮಹಾರಾಜ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾಗಿ ಸೇವೆ ಸಲ್ಲಿಸುತ್ತಿರುವ ಪ್ರೋ. ಎಂ. ಎಸ್. ಗಾಣಿಗೇರ ಅವರಿಗೆ ಕರ್ನಾಟಕ ಸೋಷಿಯಲ್ ಕ್ಲಬ್ ಹುಬ್ಬಳ್ಳಿ ಇವರು ಕನ್ನಡ ರಾಜ್ಯೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಪ್ರೆಸ್‍ಕ್ಲಬ್, ಸ್ವರ್ಣ ಭವನ ಲ್ಯಾಮಿಂಗ್ಟ್‍ನ್ ರೋಡ್ ಹುಬ್ಬಳ್ಳಿಯಲ್ಲಿ ನವ್ಹೆಂಬರ್ 22 ರಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಇವರು 2014 ರಲ್ಲಿ ಸಿರಿಗನ್ನಡ ರಾಜ್ಯೋತ್ಸವ ಪ್ರಶಸ್ತಿ, 2014 ರಲ್ಲಿ ಕರ್ನಾಟಕ ಭೂಷಣ ಪ್ರಶಸ್ತಿ, 2016 ರಲ್ಲಿ ಬಸವಜ್ಯೋತಿ ರಾಜ್ಯ ಪ್ರಶಸ್ತಿ, 2016 ರಲ್ಲಿ ಶಿಕ್ಷಕರತ್ನ ರಾಜ್ಯ ಪ್ರಶಸ್ತಿ, 2016 ರಲ್ಲಿ ಕನಕ ಗೌರವ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ, ಸಮಾಜ ಸೇವೆಯಲ್ಲಿ, ಸಭೆ ಸಮಾರಂಭದÀಲ್ಲಿ ನಿರೂಪಕರಾಗಿ ಕಾರ್ಯ ನಿರ್ವಹಿಸುತ್ತಾ ಸರಳ ವ್ಯಕ್ತಿತ್ವವನ್ನು ಹೊಂದಿರುವ ಇವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು ಸಂತಸವಾಗಿದೆ.
ಇವರಿಗೆ ಮರಾಠಾ ವಿದ್ಯಾ ಪ್ರಸಾರಕ ಮಂಡಳದ ಆಡಳಿತ ಮಂಡಳಿಯ ಎಲ್ಲ ಪದಾಧಿಕಾರಿಗಳು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು, ಸಮಾಜ ಬಾಂದವರು ಅಭಿನಂದನೆ ಸಲ್ಲಿಸಿದ್ದಾರೆ.