ಕನ್ನಡ ವಿಭೂಷಣ ರಾಜ್ಯ ಪ್ರಶಸ್ತಿಗೆ ಆಯ್ಕೆ

ಆಳಂದ: ಆ.6:ತಾಲ್ಲೂಕಿನ ಲಾಡಚಿಂಚೋಳಿಯ ಶ್ರೀ ಸಿದ್ದೇಶ್ವರ ಪ್ರೌಢಶಾಲೆಯ ಮುಖ್ಯಗುರು ಹಾಗೂ ಜಿಲ್ಲೆಯ ಸಾಹಿತಿಗಳಾದ ಧರ್ಮಣ್ಣ ಎಚ್ ಧನ್ನಿ ಹಾಗೂ ಮಹಾಂತೇಶ ಎನ್ ಪಾಟೀಲ ಅವರಿಗೆ ಗೋಕಾಕದ ನಾಡಿನ ಸಮಾಚಾರ ಸೇವಾ ಸಂಘವು ಕೊಡಲಿರುವ ‘ಕನ್ನಡ ವಿಭೂಷಣ’ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಕಳೆದ ದಶಕಗಳಿಂದ ಕಲೆ, ಸಾಹಿತ್ಯ, ಸಾಂಸ್ಕøತಿಕ ಮತ್ತು ಕನ್ನಡಪರ ಚಟುವಟಿಕೆಗಳನ್ನು ಆಯೋಜಿಸಿ ನುಡಿ ಸೇವೆ ಮಾಡುತ್ತಿದ್ದಾರೆ. ಇವರಿಬ್ಬರ ಸಾಹಿತ್ಯ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಇದೇ 10 ರಂದು ಬೆಳಿಗ್ಗೆ 11ಕ್ಕೆ ಧಾರವಾಡದ ರಂಗಾಯಣ ಸಭಾ ಭವನದಲ್ಲಿ ಯುವ ಕಾರ್ಯ ನಿರ್ವಹಿಸುವ ಪತ್ರಕರ್ತರ ಸಂಘ, ಆಶ್ರಯ ಸೇವಾ ಸಂಘ ಗೋಕಾಕ ಇವೆ ಸಂಯುಕ್ತಾಶ್ರಯದಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ನಿಮಿತ್ತ ಏರ್ಪಡಿಸುವ ಕವಿ ಸಮ್ಮೇಳನದಲ್ಲಿ ಪ್ರದಾನ ಮಾಡಲಾಗುತ್ತಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳಾಗಿ ಹಾಗೂ ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನಹಡಗಿಲ್‍ನ ರಾಜ್ಯ ಸಂಚಾಲಕರಾಗಿ ಧನ್ನಿ ಅವರು ಸೇವೆ ಸಲ್ಲಿಸುತ್ತಿದ್ದಾರೆ. ಮಹಾಂತೇಶ ಪಾಟೀಲ ಅವರು ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.